ಕೋವಿಡ್ 19 ಮೂರನೇ ಅಲೆ ನಿಯಂತ್ರಣ ಮಾರ್ಗಸೂಚಿ : ತಿದ್ದುಪಡಿ ಆದೇಶ.

Cnewstv.in / 12.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ತಿದ್ದುಪಡಿ ಮಾಡಲಾಗಿದೆ.

*ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ/ಆರ್‍ಎಟಿ ನೆಗೆಟಿವ್ ವರದಿ/ಕೋವಿಡ್ 2ನೇ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ.

*ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ಜೋಗ್ ಜಲಪಾತ, ಆಗುಂಬೆಯ ಸೂರ್ಯಾಸ್ಥ ವೀಕ್ಷಣೆಯ ಸ್ಥಳ, ಗಾಜನೂರು ಡ್ಯಾಂ, ಬಿ.ಆರ್.ಪಿ ಡ್ಯಾಂ, ಹುಲಿ ಮತ್ತು ಸಿಂಹಧಾಮ, ಸಕ್ರೆಬೈಲು ಆನೆ ಬಿಡಾರ ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ/ಆರ್‍ಎಟಿ ನೆಗೆಟಿವ್ ವರದಿ/ಕೋವಿಡ್ 2ನೇ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=5386

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments