Cnewstv.in / 16.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ನಗರದಲ್ಲಿ ಈ ಬಾರಿಯೂ ಎಂದಿನಂತೆಯೇ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ ಎಂದು ಹಿಂದೂ ಮಹಾ ಮಂಡಳಿ ತಿಳಿಸಿದೆ. ಪ್ರತಿವರ್ಷದಂತೆ ಈ ಬಾರಿಯೂ ಹಿಂದೂ ಮಹಾಸಭಾ ಗಣಪತಿಯನ್ನು ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾಪಿಸಿ, ನಂತರ ತುಂಗಾನದಿಯಲ್ಲಿ ವಿಸರ್ಜಿಸಲು ಮಂಡಳಿಯು ಸಭೆಯಲ್ಲಿ ನಿರ್ಧರಿಸಲಾಗಿದೆ.
ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತಿದ್ದ ಹಿಂದೂ ಮಹಾಸಭಾ ಗಣಪತಿಯ ಭವ್ಯ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಳೆದ ವರ್ಷದಂತೆ ಈ ಬಾರಿ ಸಹಾ ರದ್ದು ಮಾಡಲಾಗಿದೆ. ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣ ಸಂಬಂಧ ಹಬ್ಬಗಳ ಆಚರಣೆಗೆ ಮಾರ್ಗಸೂಚಿ ಹೊರಡಿಸಿರುವ ಹಿನ್ನೆಲೆಯಲ್ಲಿ ಇಂದು ನಡೆದ ಹಿಂದೂ ಮಹಾ ಮಂಡಳಿಯ ಸಭೆಯಲ್ಲಿ ಈ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.
ಸಭೆಯಲ್ಲಿ ಹಿಂದೂ ಮಹಾಸಭಾ ಮಂಡಳಿ ಅಧ್ಯಕ್ಷರಾದ ಎಂ ಕೆ ಸುರೇಶ್ ಕುಮಾರ್, ಸತ್ಯನಾರಾಯಣ, ಗೋಪಾಲಸ್ವಾಮಿ, ನಿರಂಜನ್, ದತ್ತಾತ್ರೇಯ ರಾವ್ ಹಾಗೂ ಮಂಡಳಿಯವರು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=5433
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv