Breaking News

6 ತಿಂಗಳ ಬಳಿಕ ಕೊರೊನಾ ಪ್ರಕರಣ ಪತ್ತೆ, ನ್ಯೂಜಿಲೆಂಡ್ 3ದಿನ ಲಾಕ್ ಡೌನ್

Cnewstv.in / 18.08.2021 / New Zealand / Contact for News and Information 9916660399

ವೆಲ್ಲಿಂಗ್ಟನ್ : 6 ತಿಂಗಳ ಬಳಿಕ ನ್ಯೂಜಿಲ್ಯಾಂಡ್ ನಲ್ಲಿ ವ್ಯಕ್ತಿಯೊಬ್ಬನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಡೀ ನ್ಯೂಜಿಲ್ಯಾಂಡ್ ದೇಶಾದ್ಯಂತ 3 ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ.

ಸೋಂಕಿತ ವ್ಯಕ್ತಿ ಭೇಟಿ ನೀಡಿದ್ದ ಸ್ಥಳದಲ್ಲಿ 7 ದಿನಗಳ ಕಾಲ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಉಳಿದ ಪ್ರದೇಶಗಳಲ್ಲಿ 3 ದಿನಗಳ ಕಾಲ‌ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ಪ್ರಧಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದುವರೆಗೂ 2926 ಜನರಿಗೆ ಕೊರೊನಾ ಸೋಂಕು ತಗಲಿದ್ದು, 26 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಬೇರೆ ದೇಶಗಳಲ್ಲಿ ಕೊರೊನಾ ಸೋಂಕಿನಿಂದ ಆದಂತಹ ಪರಿಣಾಮಗಳನ್ನು ಕಣ್ಣಾರೆ ನೋಡಿದ್ದೇವೆ ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್ ಡೌನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ : https://cnewstv.in/?p=5454

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*