Cnewstv.in / 18.08.2021/ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು.
ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ ದುರಸ್ತಿ ಬಳಕೆ ಮಾಡುವಂತೆ ಸೂಚನೆ ನೀಡಲಾಯಿತು. ಪ್ರತಿ ಜಿಲ್ಲೆಯ ರಸ್ತೆಗಳ ಸಾಂದ್ರತೆಯನ್ನು ಪರಿಶೀಲಿಸಿ, ಕಡಿಮೆ ಇರುವ ಜಿಲ್ಲೆಗಳಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಇದನ್ನು ಒದಿ : https://cnewstv.in/?p=5462
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv