Cnewstv.in / 18.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿ, ಗ್ರಾಮೀಣ ಕ್ರೀಡೆಗಳು ಮತ್ತು ಕ್ರೀಡಾಪಟುಗಳನ್ನು ಉತ್ತೇಜಿಸಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪವಾವತಿ ಸಂಬಂಧ ಅರ್ಜಿ ಆಹ್ವಾನಿಸಿದೆ.
2020 ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಸೇವಾಸಿಂಧು ಆನ್‍ಲೈನ್ http://serviceonline.gov.in/karnataka ಮೂಲಕ ಅರ್ಜಿ ಸಲ್ಲಸಬಹುದು.
2021-22 ನೇ ಸಾಲಿನಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲಿ ್ಲಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಟಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದ್ದು, ಸೆಪ್ಟೆಂಬರ್ 15 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಅರ್ಜಿ ನಮೂನೆ ಮತ್ತು ಇತರೆ ಅಗತ್ಯ ವಿವರಗಳಿಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ದೂ.ಸಂ: 08182-223328 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=5474
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv