Breaking News

ಕೊರೋನಾ ನಿಯಂತ್ರಣದಲ್ಲಿದೆ ಆತಂಕಪಡುವ ಅಗತ್ಯವಿಲ್ಲ

Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು : ಕೋವಿಡ್-19 ನಿಯಂತ್ರಣದಲ್ಲಿದ್ದು 3ನೇ ಅಲೆಯ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಜನರಿಗೆ ಅನಿಶ್ಚಿತತೆ ಇರುವುದು ನಿಜ. ಆದರೆ ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. ಕಟ್ಟಿನಿಟ್ಟಿನ ಕ್ರಮಗಳ ಮೂಲಕ 3ನೇ ಅಲೆಯನ್ನು ತಡೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಬಿಬಿಎಂಪಿ ವತಿಯಿಂದ ಮನೆ ಮನೆಗೆ ತೆರಳಿ ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಕೋವಿಡ್ ಲಸಿಕೆ ನೀಡಿಕೆಯು ಉತ್ತಮವಾಗಿ ನಡೆಯುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಹಾಗೂ ಆಕ್ಸಿಜನ್ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈಗ ಆಸ್ಪತ್ರೆಯಲ್ಲೇ ಆಕ್ಸಿಜನ್ ಉತ್ಪಾದಿಸಲಾಗುತ್ತಿದೆ. ವೈದ್ಯಕೀಯ ಕೊರತೆ ಹಾಗೂ ಸಿಬ್ಬಂದಿ ಕೊರತೆಯನ್ನು ನಿವಾರಿಸಲಾಗಿದ್ದು, ಕೋವಿಡ್ ಮೂರನೇ ಅಲೆಯನ್ನು ತಡೆಯಲು ಸರ್ವ ರೀತಿಯಲ್ಲೂ ಸರ್ಕಾರ ಸಿದ್ದವಿದೆ ಎಂದರು.

ಇದನ್ನು ಒದಿ : https://cnewstv.in/?p=5484

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*