Cnewstv.in / 20.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಸ್ಟೇಜ್ ಕ್ಯಾರೇಜ್ ಮತ್ತು ಕಾಂಟ್ರಾಕ್ಟ್ ಕ್ಯಾರೇಜ್ ವಾಹನಗಳಿಗೆ ತೆರಿಗೆ ಪಾವ ತಿಸಲು ಒಂದು ತಿಂಗಳ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ಖಾಸಗಿ ಬಸ್ ಮಾಲೀಕರ ವಿವಿಧ ಸಂಘಟನೆಗಳು ತಮ್ಮನ್ನು ಭೇಟಿ ಮಾಡಿ, ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದರಿಂದ ರಸ್ತೆ ತೆರಿಗೆ ಪಾವತಿ ದಿನಾಂಕವನ್ನು ಮುಂದೂಡಲು ಮನವಿ ಮಾಡಿದ್ದವು.
ಈ ನಿಟ್ಟಿನಲ್ಲಿ ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಾರಿಗೆ ಉದ್ದಿಮೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಆ.15ರಂದು ಪಾವತಿಸಬೇಕಾಗಿದ್ದ ರಸ್ತೆ ತೆರಿಗೆಯನ್ನು ಸೆ.15ರವರೆಗೆ ಮುಂದೂಡಲಾಗಿದೆ. ಅದೇ ರೀತಿ ಸೆ.15ರಂದು ಪಾವತಿಸಬೇಕಿದ್ದ ರಸ್ತೆ ತೆರಿಗೆಯನ್ನು ಅಕ್ಟೋಬರ್ 15ರವರೆಗೆ ದಂಡ ರಹಿತವಾಗಿ ಪಾವತಿ ಸಲು ವಿಸ್ತರಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನು ಒದಿ : https://cnewstv.in/?p=5514
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv