Cnewstv.in / 21.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಸೋಮವಾರದಿಂದ ರಾಜ್ಯದಲ್ಲಿ 9 ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು ಎಂದು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿರವರು ಕರೆ ನೀಡಿದ್ದಾರೆ. ಆರ್‍ಟಿನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲೆ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಆ.23ರಿಂದ ಭೌತಿಕ ತರಗತಿಗಳು ಆರಂಭವಾಗುತ್ತಿದೆ. ಆರಂಭದ ದಿನ ಬೆಂಗಳೂರಿನ ಕೆಲ ಶಾಲೆಗಳಿಗೆ ನಾನು ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸುತ್ತೇನೆ ಎಂದರು.
ಶಾಲೆಗಳ ಆರಂಭಕ್ಕೆ ಎಲ್ಲಾ ರೀತಿಯ ಸಿದ್ಧತೆ ಆಗಿದೆ. ಶಿಕ್ಷಕರಿಗೆ ವ್ಯಾಕ್ಸಿನೇಷನ್ ಆಗಿದೆ, ಶಾಲೆಗಳನ್ನು ಸ್ಯಾನಿಟೈಜ್ ಮಾಡಲಾಗಿದೆ. ಅಂತರ ಕಾಯ್ದುಕೊಂಡೇ ತರಗತಿಗಳನ್ನು ನಡೆಸಲಾಗುತ್ತದೆ, ದಿನ ಬಿಟ್ಟು ದಿನದಂತೆ ಬ್ಯಾಚ್‍ಗಳನ್ನು ಮಾಡಿ ಶಾಲೆ ನಡೆಸಲಾಗುತ್ತದೆ ಎಂದು ಹೇಳಿದರು. ಪೋಷಕರ ಸಮ್ಮತಿ ಪಡೆದೇ ಮಕ್ಕಳು ಶಾಲೆಗೆ ಬರಬೇಕು,ಪೋಷಕರು ಕೂಡ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕುಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಗಮನ ಹರಿಸಬೇಕು, ಶಾಲೆಗೆ ಹೋಗಿ ಬಂದ ತಕ್ಷಣ ಮಕ್ಕಳ ಆರೋಗ್ಯದ ಮೇಲೆ ನಿಗಾ ಇರಿಸಬೇಕು. ನಿಧಾನವಾಗಿ ಮಕ್ಕಳು ಶಾಲೆಗೆ ಬರಬೇಕು ಎನ್ನುವುದೇ ನಮ್ಮ ಉದ್ದೇಶ ಎಂದರು.
ಕಳೆದ ಒಂದೂವರೆ ವರ್ಷದಿಂದ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಿಲ್ಲ. ಹಾಗಾಗಿ ಹಂತಹಂತವಾಗಿ ಹಾಜರಿ ಹೆಚ್ಚಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಯಾವುದೇ ಆತಂಕ ಇಲ್ಲದೆ ವಿದ್ಯಾರ್ಥಿಗಳು ಶಾಲೆಗೆ ಬರಬಹುದು ಎಂದ ಅವರು, ಕೊರೊನಾ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ತೆರೆಯಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನು ಒದಿ : https://cnewstv.in/?p=5534
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments