Cnewstv.in / 21.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಈಸೂರು ದಂಗೆ ಮೂಲಕ ಸ್ವತಂತ್ರ ಹೋರಾಟಕ್ಕೆ ಕಿಚ್ಚು ಹಚ್ಚಿದ ಶಿಕಾರಿಪುರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವುಗೊಳಿಸುವ ಮೂಲಕ ಅಪಮಾನ ಮಾಡಲಾಗಿದೆ.
ಸಂಗೊಳ್ಳಿ ರಾಯಣ್ಣ ಜನ್ಮದಿನದಂದು ಶಿಕಾರಿಪುರದಲ್ಲಿ ಪುತ್ಥಳಿಯನ್ನು ಅನಾವರಣಗೊಳಿಸಲು ಸಿದ್ಧತೆ ನಡೆಸುತ್ತಿರುವಾಗಲೇ ರಾತ್ರೋರಾತ್ರಿ ತಾಲ್ಲೂಕು ಹಾಗೂ ಜಿಲ್ಲಾಡಳಿತ ಪುತ್ಥಳಿಯನ್ನು ತೆರವುಗೊಳಿಸಿರುವುದು ಖಂಡನೀಯ.
ಸಂಸದ ಬಿ.ವೈ ರಾಘವೇಂದ್ರ ಹಾಗೂ ಎಂ.ಐ.ಡಿ.ಬಿ. ಅಧ್ಯಕ್ಷ ಗುರುಮೂರ್ತಿ ರಾಜಕೀಯ ಸಂಚು ಮಾಡಿ ಪುತ್ಥಳಿ ತೆರವುಗೊಳಿಸಲು ಕಾರಣಕರ್ತರಾಗಿದ್ದಾರೆ. ಪುತ್ಥಳಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು. ಸಂಸದರು ಈ ಬಗ್ಗೆ ಕ್ರಮಕೈಗೊಳ್ಳದಿದ್ದರೆ ಅಧಿಕಾರ ಕಳೆದುಕೊಳ್ಳುತ್ತಾರೆ. ಆದಷ್ಟು ಬೇಗ ಪುತ್ಥಳಿಯನ್ನು ಅದೇ ಜಾಗದಲ್ಲಿ ಮರುಸ್ಥಾಪನೆ ಮಾಡಬೇಕು.
ವಿನಯ್ ರಾಜಾವತ್, ರಾಜ್ಯಾಧ್ಯಕ್ಷರು, ವಿದ್ಯಾರ್ಥಿ ಸಂಘಟನೆ.
ಇದನ್ನು ಒದಿ : https://cnewstv.in/?p=5536
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv