Cnewstv.in / 21.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಸ್ವತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಆಯೋಜನೆ ಮಾಡಲಾಗಿದ್ದ ಸೈಕಲ್ ಜಾಥಾದಲ್ಲಿ ಮಾತನಾಡಿದ ಕೆಎಸ್ ಈಶ್ವರಪ್ಪನವರು “ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ. ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳನ್ನು ಎತ್ತಿಕೊಂಡು ಅತ್ಯಾಚಾರ ದಬ್ಬಾಳಿಕೆ ನಡೆಯುತ್ತಿದೆ. ಇದನ್ನು ನೋಡಿದಾಗ ಪ್ರಪಂಚದಲ್ಲಿ ಮಾನವೀಯತೆ ಇಲ್ಲವೇನೋ ಎನ್ನುವಂತಿದೆ. ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಎಲ್ಲದೂ ಕೆಟ್ಟದೇ. ಈ ರೀತಿಯ ಘಟನೆಗಳು ಮನುಷ್ಯರು ತಲೆತಗ್ಗಿಸುವಂತಿದೆ. ಅಲ್ಲಿ ಕ್ರೂರತೆ ವಿಜ್ರಂಭಿಸುತ್ತಿದೆ.
ಮನುಷತ್ವವೂ ಇಲ್ಲದೆ ನಡೆಯುತ್ತಿರುವ ಚಟುವಟಿಕೆಗಳನ್ನು ಯಾವೊಬ್ಬ ನಾಗರಿಕನೂ ಬೆಂಬಲಿಸಲು ಸಾಧ್ಯವಿಲ್ಲ. ಅಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿ ನಮ್ಮ ದೇಶದಲ್ಲಿ ನಾವು ಏನು ಒಳ್ಳೆಯದು ಮಾಡಬೇಕು ಎಂದು ತೀರ್ಮಾನಿಸಬೇಕು ಎಂದರು.
ಭಾರತ ವಿಶ್ವದಲ್ಲಿಯೇ ಅತ್ಯಂತ ಶಾಂತಿಪ್ರಿಯ ರಾಷ್ಟ್ರವಾಗಿದೆ ನಾವು ಯಾರ ತಂಟೆಗೂ ಹೋಗೋದಿಲ್ಲ ಆದರೆ ನಮ್ಮ ಸುದ್ದಿಗೆ ಬಂದರೆ ಬಿಡುವುದಿಲ್ಲ ಎಂಬ ಸಂದೇಶವನ್ನು ಇದೇ ಸಂದರ್ಭದಲ್ಲಿ ಈಶ್ವರಪ್ಪನವರು ನೀಡಿದರು.
ಇದನ್ನು ಒದಿ : https://cnewstv.in/?p=5544
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv