Breaking News

ಸುಮಾರು ೧೦೦ ಬೋಧಕೇತರ ನೌಕರರಿಗೆ ಸಿಹಿ ಸುದ್ದಿ : ಕುವೆಂಪು ವಿವಿ: ಸಿಬ್ಬಂದಿಗೆ ವೇತನ ನಿಗದೀಕರಣ ಸೌಲಭ್ಯ

Cnewstv.in / 23.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಂಕರಘಟ್ಟ : ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ವಿಶ್ವವಿದ್ಯಾಲಯದ ಭೋಧಕೇತರ ನೌಕರರ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ ವೇತನ ನಿಗದೀಕರಣ ಸೌಲಭ್ಯದ ಆದೇಶವನ್ನು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅರ್ಹ ಫಲಾನುಭವಿಗಳಿಗೆ ನೀಡಿದರು. ಕಳೆದ ಗುರುವಾರ ಸಾಂಕೇತಿಕವಾಗಿ ಇಬ್ಬರು ನೌಕರರು ಆದೇಶವನ್ನು ಸ್ವೀಕರಿಸುವುದರೊಂದಿಗೆ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಕುಲಸಚಿವೆ ಜಿ. ಅನುರಾಧ, ಸಿಂಡಿಕೇಟ್ ಸದಸ್ಯರಾದ ಧರ್ಮಪ್ರಸಾದ್ ಮತ್ತು ರಾಮಲಿಂಗಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಿರಿಯ ಸಹಾಯಕರಿಂದ ಮೊದಲ್ಗೊಂಡು ಸಹಾಯಕ ಕುಲಸಚಿವ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯದ ಸುಮಾರು ೧೦೦ ಮಂದಿ ಭೋಧಕೇತರ ಸಿಬ್ಬಂದಿಗೆ ಈ ಜೇಷ್ಠತಾ ಪಟ್ಟಿಯ ಆಧಾರದ ಮೇಲೆ ಮುಂಬಡ್ತಿ ಮತ್ತು ವೇತನ ನಿಗದೀಕರಣದ ಆರ್ಥಿಕ ಸೌಲಭ್ಯ ದೊರಕಲಿದ್ದು, ನೌಕರರಲ್ಲಿ ಸಂತಸ ಮನೆಮಾಡಿದೆ.

“ವಿಶ್ವವಿದ್ಯಾಲಯದ ಆರಂಭದ ದಿನಗಳಿಂದಲೂ ಕಗ್ಗಂಟಾಗಿದ್ದ ಜೇಷ್ಠತಾ ಪಟ್ಟಿಯನ್ನು ಯಾವುದೇ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಅಂತಿಮಗೊಳಿಸುವುದು ಆಡಳಿತವರ್ಗಕ್ಕೆ ಸವಾಲಿನ ವಿಷಯವಾಗಿತ್ತು. ಆದರೆ, ತಾವು ಅಧಿಕಾರ ವಹಿಸಿಕೊಂಡ ನಂತರ ಆದ್ಯತೆಯ ಮೇರೆಗೆ ೨೦೨೦ರ ಜನವರಿ ತಿಂಗಳಿನಲ್ಲಿ ಜೇಷ್ಠತಾ ಪಟ್ಟಿಯನ್ನು ಬಿಡುಗಡೆಗೊಳಿಸಲಾಯಿತು” ಎಂದು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಪ್ರತಿಕ್ರಿಯಿಸಿದರು.

ಜೇಷ್ಠತಾ ಪಟ್ಟಿ ಅಂತಿಮಗೊಂಡ ನಂತರ ಯಾವುದೇ ನೌಕರರೂ ಸೇವಾ ಸೌಲಭ್ಯದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ, ಸರ್ಕಾರದ ಡಿಪಿಎಆರ್ ಇಲಾಖೆಯ ತಜ್ಞರನ್ನು ಆಹ್ವಾನಿಸಿ ಮತ್ತೊಮ್ಮೆ ಪಟ್ಟಿಯನ್ನು ಪರಾಮರ್ಶಿಸಿ, ಅದರ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿತ್ತು. ಆದರೆ, ವೇತನ ನಿಗದೀಕರಣ ಸೌಲಭ್ಯ ನೀಡಲಾಗಿರಲಿಲ್ಲ. ಇದೀಗ, ವೇತನ ನಿಗದೀಕರಣದ ಸೌಲಭ್ಯವನ್ನು ನೀಡುವುದರೊಂದಿಗೆ ಬಹುವರ್ಷಗಳ ಸಮಸ್ಯೆಗೆ ಪರಿಹಾರ ದೊರಕಿದಂತಾಗಿದೆ. ಆಗಸ್ಟ್ ೨೫ರೊಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ಆದೇಶ ನೀಡಲಾಗುವುದು ಎಂದು ಕುಲಸಚಿವೆ ಜಿ. ಅನುರಾಧ ಈ ಸಂದರ್ಭದಲ್ಲಿ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯದ ಬೋಧಕೇತರ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್, ವೇತನ ನಿಗದೀಕರಣದ ಸೌಲಭ್ಯವನ್ನು ಅರ್ಹ ನೌಕರರಿಗೆ ನೀಡಿರುವುದಕ್ಕೆ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಸಿಂಡಿಕೇಟ್ ಸದಸ್ಯರಾದ ಧರ್ಮಪ್ರಸಾದ್, ರಾಮಲಿಂಗಪ್ಪ, ರಮೇಶ್ ಬಾಬು, ಪ್ರೊ. ಕಿರಣ್ ದೇಸಾಯಿ, ನಿರಂಜನ್ ಮೂರ್ತಿ, ಮಂಜುನಾಥ್, ಡಾ. ಸಿ. ಗೀತಾ, ಪ್ರೊ. ವಿ. ಕೃಷ್ಣ, ನಾಗರಾಜ್ ಹಾಗೂ ಇತರೆ ಸಿಂಡಿಕೇಟ್ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ಇದನ್ನು ಒದಿ : https://cnewstv.in/?p=5564

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments