Breaking News

ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ.

Cnewstv.in / 24.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ/ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2020 ನೇ ಕ್ಯಾಲೆಂಡರ್ ವರ್ಷದಲ್ಲಿ (01-01-2020 ರಿಂದ 31-12-2020) ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕಡೆಯ ದಿನವಾಗಿದ್ದು, ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿ ಪಡೆದು ಕೊನೆಯ ದಿನಾಂಕದೊಳಗೆ ಈ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=5572

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*