Cnewstv.in / 24.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಪ್ಪನಾಯಕ ಪ್ರತಿಮೆ ಬಳಿ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು
ತಾಲಿಬಾನ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಯತ್ನಾಳ್ ತಮ್ಮ ಬಾಯಿ ಚಪಲಕ್ಕಾಗಿ ಹೊಲಸು ಮಾತುಗಳನ್ನಾಡಿದ್ದಾರೆ. ಅವರ ನಾಲಿಗೆಯೇ ಅವನ ಗುಣವನ್ನು ತಿಳಿಸುತ್ತದೆ. ಯತ್ನಾಳ್ ತಕ್ಷಣವೇ ಕನ್ನಡಿಗರಿಗೆ ಕ್ಷಮೇ ಕೇಳಬೇಕು. ಧರ್ಮಗಳ ನಡುವೆ ಮಾತನಾಡಿ, ದೇಶದಲ್ಲಿ ಶಾಂತಿ ಕದಡುವ ಹೇಳಿಕೆ ನೀಡುತ್ತಿರುವ ಇವರನ್ನು ಶಾಸಕ ಸ್ಥಾನದಿಂದ ಕೂಡಲೇ ವಜಾಗೊಳಿಸಿ , ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯಪಾಲರಲ್ಲಿ ಯುವ ಕಾಂಗ್ರೆಸ್ ಆಗ್ರಹಿಸುತ್ತದೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎನ್. ರಮೇಶ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್,ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ ಗಿರೀಶ್, ಬಿ.ಲೋಕೇಶ್, ಎಸ್.ಕುಮರೇಶ್ , ಶಶಿಕುಮಾರ್ ಸಿರಿಗೆರೆ , ಕಲೀಮ್ ಅಹಮ್ಮದ್ ಸಿರಿಗೆರೆ, ಅರುಣ್ ನವುಲೆ , ವೆಂಕಟೇಶ್ ಕಲ್ಲೂರು , ಪವನ್ , ಮಸ್ತಾನ್ ,ಸುಹಾಸ್ ಗೌಡ , ಶ್ರೀನಿವಾಸ್ , ರಾಹುಲ್ ಸಿಗೇಹಟ್ಟಿ, ಪ್ರಶಾಂತ್ , ದೇವರಾಜ್ , ನಾಗರಾಜ್ , ವೆಂಕಟೇಶ್, ಅಭಿ, ಚೇತನ್ , ನಂದಕುಮಾರ್ , ಇತರರು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=5574
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv