Breaking News

ಕೊರೊನಾ ಸಂಭಾವ್ಯ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮ – ಸಚಿವ ಡಾ.ಕೆ.ಸುಧಾಕರ್

Cnewstv.in / 25.08.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು : ಕೊರೊನಾ ಸಂಭಾವ್ಯ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಟೆಸ್ಟಿಂಗ್ ನಿರ್ವಹಣೆಗೆ ನೂತನ ಕಾರ್ಯತಂತ್ರ ರೂಪಾಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಜಿಲ್ಲಾವಾರು ಪರೀಕ್ಷಾ ಗುರಿಯನ್ನು 1.75 ಲಕ್ಷಕ್ಕೆ ಏರಿಸಲಾಗಿದೆ. ಒಟ್ಟು ಪರೀಕ್ಷೆಗಳಲ್ಲಿ ಶೇ.10ರಷ್ಟು ಪರೀಕ್ಷೆಗಳನ್ನು 18 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಾಡಬೇಕೆಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹರಡುವಿಕೆ ಮೇಲೆ ನಿಗಾವಹಿಸಲು ಒಟ್ಟಾರೆ ಪರೀಕ್ಷೆಗಳಲ್ಲಿ ಶೇ.50ರಷ್ಟು ಪರೀಕ್ಷೆಗಳನ್ನು ತಾಲ್ಲೂಕು ಕೇಂದ್ರ ಪ್ರದೇಶದ ಹೊರಗೆ ನಡೆಸಲು ಸೂಚಿಸಲಾಗಿದೆ. ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇರುವ ಗ್ರಾಮಪಂಚಾಯತ್/ ಪಟ್ಟಣ ಪ್ರದೇಶಗಳಲ್ಲಿ ರೋಗಲಕ್ಷಣರಹಿತ ಪ್ರಕರಣಗಳನ್ನು ಪೂಲಿಂಗ್ ಮೂಲಕ ಪರೀಕ್ಷೆಗೊಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=5588

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*