Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ ಆಡಳಿತ ಸುವ್ಯವಸ್ಥೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮಹಿಳೆಯರಿಗೆ ರಕ್ಷಣೆಯೇ ಇಲ್ಲವಾಗಿದೆ. ಮಹಿಳೆಯರ ರಕ್ಷಣೆಯ ಬಗ್ಗೆ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಸರ್ಕಾರ ಗಮನ ವಹಿಸಬೇಕಿತ್ತು.
ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ನಂತರ ಆರೋಪಿಗಳನ್ನು ಬಂಧಿಸಲು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಗೃಹಸಚಿವರು ವಿಫಲರಾಗಿದ್ದಾರೆ. ಗೃಹ ಖಾತೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿರುವ ಸಚಿವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ವತಿಯಿಂದ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್ ಕೆ. ಯುವ ಕಾಂಗ್ರೆಸ್ ಮುಖಂಡರಾದ ಮಧುಸುದನ್, ಬಾಲಾಜಿ, ಮೊಹಮ್ಮದ್, ರವಿ, ಗಿರೀಶ್, ವಿನಯ್ ತಾಂಡ್ಲೆ ಇನ್ನಿತರರು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=5611
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments