Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ), ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆ.31 ಕಡೆಯ ದಿನವಾಗಿದೆ.
4 ವರ್ಷ ಅವಧಿಯ(3ವರ್ಷ+1 ವರ್ಷ ಕಡ್ಡಾಯ ಕೈಗಾರಿಕಾ ತರಬೇತಿ) ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್‍ಗೆ ಎಸ್‍ಎಸ್‍ಎಲ್‍ಸಿ ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಶೇ.30 ಸೀಟುಗಳು ವಿದ್ಯಾರ್ಥಿನಿಯರಿಗೆ ಮೀಸಲಿರಿಸಲಾಗಿದೆ.
ಐಟಿಐ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳಿಗೆ 2ನೇ ವರ್ಷದ ಡಿಪ್ಲೊಮಾ ತರಗತಿಗಳಿಗೆ ನೇರ ಪ್ರವೇಶ ಕಲ್ಪಿಸಲಾಗುವುದು. ಆಫ್‍ಲೈನ್ ಅರ್ಜಿಗಾಗಿ ಕೇಂದ್ರದ ಪ್ರಾಂಶುಪಾಲರಿಂದ ಖುದ್ದಾಗಿ ಅರ್ಜಿ ಪಡೆದು ಸಲ್ಲಸಬಹುದು ಅಥವಾ ಆನ್‍ಲೈನ್ ಅರ್ಜಿಯನ್ನು ವೆಬ್‍ಸೈಟ್ www.gttc.co.in ಮುಖಾಂತರ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ), ಪ್ಲಾಟ್ ಸಿಎ-38 ನಿದಿಗೆ, ಕೈಐಡಿಬಿ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ, ಶಿವಮೊಗ್ಗ 5777 222, ದೂ.ಸಂ: 08182-246054, 9980357435, 9449286543 ನ್ನು ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=5620
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments