Cnewstv.in / 27.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆಗಳನ್ನು ಅರ್ಹರಿಗೆ ನೀಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಸೆಪ್ಟೆಂಬರ್ 1ರಿಂದ ಪ್ರತಿದಿನ 5 ಲಕ್ಷ ಕೋವಿಡ್ ಲಸಿಕೆ ನೀಡುವುದು ನಮ್ಮ ಗುರಿಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ರಾಜ್ಯಕ್ಕೆ ಅಗತ್ಯವಿರುವ ಲಸಿಕೆಯಿಂದ ಪೂರೈಕೆ ಮಾಡುವಂತೆ ಮನವಿ ಮಾಡಿದೆ. ಅವರಿಂದ ಸೂಕ್ತವಾದ ಸ್ಪಂದನೆ ಸಿಕ್ಕಿದೆ, ಅವರು ಲಸಿಕೆಗಳನ್ನು ಪೂರೈಕೆ ಮಾಡುವ ಭರವಸೆಯನ್ನು ಕೊಟ್ಟಿದ್ದಾರೆ.
ಈಗಾಗಲೇ ಪ್ರಾಯೋಗಿಕವಾಗಿ 2ಲಕ್ಷ ಸಮೀಪ ಲಸಿಕೆಯನ್ನು ನೀಡಲಾಗಿದೆ. ಸೆಪ್ಟೆಂಬರ್ 1ರಿಂದ ಲಸಿಕೆ ಹೆಚ್ಚಳ ಮಾಡಬೇಕೆಂದು ಸೂಚನೆ ಅಧಿಕಾರಿಗಳಿಗೆ ನೀಡಲಾಗಿದೆ ಎಂದರು.
ಇದನ್ನು ಒದಿ : https://cnewstv.in/?p=5622
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv