Cnewstv.in / 30.08.2021 / ಚಿತ್ತಾಪುರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಚಿತ್ತಾಪುರ : ಚಿತ್ತಾಪುರ ತಾಲೂಕಿನ ಬಳವಡಗಿ ಮತ್ತು ಕೊಂಚೂರು ಗ್ರಾಮಗಳಲ್ಲಿ ಮಳೆಯಿಂದಾಗಿ ಮತ್ತೆ ಪ್ರವಾಹದ ಪರಿಸ್ಥಿತಿ ಉಂಟಾಗಿದೆ.
ಕೊಂಚೂರು ಮತ್ತು ಬಳವಡಗಿ ಗ್ರಾಮಗಳಲ್ಲಿ ನಿರಂತರವಾಗಿ ಮಳೆ ಬಂದರೆ ಸೇತುವೆಗಳು ಸಂಪೂರ್ಣವಾಗಿ ಮುಳುಗಡೆಯಾಗುತ್ತದೆ. ಹಳ್ಳ ಉಕ್ಕಿದಾಗ ಬಳವಡಗಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಕುಂಚೂರು ಗ್ರಾಮ ಹಳ್ಳದಿಂದ ಎತ್ತರದಲ್ಲಿರುವುದರಿಂದ ಸ್ವಲ್ಪಮಟ್ಟಿಗೆ ಸುರಕ್ಷಿತವಾಗಿದೆ.
ನಿರಂತರವಾಗಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿರುವುದರಿಂದ ಎರಡು ಗ್ರಾಮಗಳ ಸೇತುವೆಗಳು ಮುಳುಗಡೆಯಾಗಿದೆ. ವಾಡಿ ನಗರಕ್ಕೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಪ್ರತಿ ವರ್ಷವೂ ಸಹ ಮಳೆಗಾಲದಲ್ಲಿ ಈ ಗ್ರಾಮದ ಜನರ ಪರಿಸ್ಥಿತಿ ಇದೇ ರೀತಿ ಆಗಿದೆ. ಇನ್ನಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳು ಇತ್ತ ಗಮನ ಹರಿಸಲಿ.
ಇದನ್ನು ಒದಿ : https://cnewstv.in/?p=5674
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv