Breaking News

ಅಲ್ಪಸಂಖ್ಯಾತ ಕಾನೂನು ಪದವೀಧರರಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Cnewstv.in / 31.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 2021-22 ನೇ ಸಾಲಿನಿಂದ 4 ವರ್ಷಗಳ ಅವಧಿಯವರೆಗೆ ತರಬೇತಿ ಅವಧಿಯ ಶಿಷ್ಯವೇತನ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಶಿಷ್ಯವೇತನ ಪಡೆಯಲಿಚ್ಚಿಸುವ ಅರ್ಹ ಅಭ್ಯರ್ಥಿಯು ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪಾರ್ಸಿ ಮತೀಯವರಾಗಿದ್ದು, 30ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಅಡ್ವೊಕೇಟ್ ಅಗಿ ಕಾರ್ಯನಿರ್ವಹಿಸಲು ನಿಗಧಿಪಡಿಸಲಾದ ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2ವರ್ಷಗಳ ಅವಧಿಯೊಳಗೆ ಇರುವವರು ಮಾತ್ರ ಅರ್ಜಿಯನ್ನು ಸಲ್ಲಿಸುವುದು.

ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50ರೂ.ಗಳನ್ನು ಮೀರಿರಬಾರದು. ಪ್ರ.-1ರಡಿಯಲ್ಲಿ ಬರುವ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆದಾಯ ಮಿತಿಯಿರುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಕೀಲರ ಸಂಘದಲ್ಲಿ ಹೆಸರನ್ನು ನೋಂದಾಯಿಸಿರಬೇಕು. ತರಬೇತಿ ಅವಧಿ 4 ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕವಾಗಿ ರೂ.5,000/-ಗಳ ಶಿಷ್ಯವೇತನ ನೀಡಲಾಗುವುದು. ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ 20ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿ ಪಡೆಯುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಮದ್ಯಂತರದಲ್ಲಿ ಬಿಟ್ಟು ಹೋಗುವಂತಿಲ್ಲ. ಬಿಟ್ಟುಹೋದಲ್ಲಿ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಹಣವನ್ನು ಬಡ್ಡಿಯೊಂದಿಗೆ ವಾಪಸ್ಸು ಪಡೆಯಲಾಗುವುದು.

ಆಸಕ್ತರು ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 15/09/2021ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಧರ್ಮಪ್ಪ ಟಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ, ಶಿವಮೊಗ್ಗ, ದೂರವಾಣಿ ಸಂಖ್ಯೆ 08182-220206 ನ್ನು ಸಂಪರ್ಕಿಸಬಹುದಾಗಿದೆ.

ಇದನ್ನು ಒದಿ : https://cnewstv.in/?p=5679

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*