Breaking News

ಜಿಲ್ಲಾ ನ್ಯಾಯಾಧೀಶರಿಂದ ಕಾರ್ಮಿಕ ಅದಾಲತ್‍ಗೆ ಚಾಲನೆ.

Cnewstv.in / 01.09/2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಸಮಸ್ಯೆ ಪರಿಹರಿಸಲು, ವಿವಿಧ ಸೌಲಭ್ಯಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಮತ್ತು ಕೋವಿಡ್ ಪರಿಹಾgಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಜಿಲ್ಲೆಯಾದ್ಯಂತ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಕಾರ್ಮಿಕರು ಈ ಅದಾಲತ್‍ನ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮುಸ್ತಫಾ ಹುಸೇನ್ ಎಸ್.ಎ. ಹೇಳಿದರು.

ಇಙದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಮಿಕ ಅದಾಲತ್ ಕಾರ್ಯಕ್ರಮಕ್ಕೆ ಅವರು ಹಸಿರು ನಿಶಾನೆ ತೋರುವ ಮೂಲಕ ಕಾರ್ಮಿಕ ಅದಾಲತ್ ಗೆ ಚಾಲನೆ ನೀಡಿ ಮಾತನಾಡಿದರು
ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್ ಮಾತನಾಡಿ,ಕಾರ್ಮಿಕ ಇಲಾಖೆ ಮತ್ತು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ, ಕಾರ್ಮಿಕ ಗೃಹ ಭಾಗ್ಯದಡಿಯಲ್ಲಿ ವಸತಿ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ ಸೇರಿದಂತೆ, ಫಲಾನುಭವಿಗಳ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಸಹಾಯಧನ, ಮದುವೆ ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಅರ್ಹ ಫಲಾನುಭವಿಗಳು ಸೂಕ್ತ ದಾಖಲೆಗಳನ್ನು ಒದಗಿಸುವ ಮೂಲಕ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

ದಿನಾಂಕ 16-08- 2021ರಿಂದ 16-09-2021ರ ವರೆಗೆ ಬೆಳಿಗ್ಗೆ 10-30ರಿಂದ ಅಪರಾಹ್ನ 04 ಗಂಟೆಯವರೆಗೆ ಕಾರ್ಮಿಕ ಅದಾಲತ್ ನಡೆಯಲಿದ್ದು, ಕಾರ್ಮಿಕರು ಸೂಕ್ತ ದಾಖಲೆಗಳೊಂದಿಗೆ ಮತ್ತು ಸ್ವೀಕೃತಿ ಪತ್ರದೊಂದಿಗೆ ಮತ್ತು ತಮ್ಮ ಬ್ಯಾಂಕ್ ಖಾತೆ ವಿಲೀನವಾದಲ್ಲಿ ಹೊಸ ಬ್ಯಾಂಕ್ ಖಾತೆ ವಿವರಗಳೊಂದಿಗೆ ಹತ್ತಿರದ ಕಾರ್ಮಿಕ ಇಲಾಖೆಯ ಆಯಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗಳಿಗೆ ಅಥವಾ ಜಿಲ್ಲಾ ಕಾರ್ಮಿಕರ ಅಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಇದನ್ನು ಒದಿ : https://cnewstv.in/?p=5692

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*