Breaking News

ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು‌ : ಅಲಹಾಬಾದ್ ಹೈಕೋರ್ಟ್.‌ Allahabad High Court : The cow must be declared a national animal:

Cnewstv.in / 02.09/2021 /ಉತ್ತರ ಪ್ರದೇಶ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಉತ್ತರ ಪ್ರದೇಶ : ಗೋವಧೆ ನಿಯಂತ್ರಣ ಕಾಯಿದೆ ಅಡಿ ಬಂಧಿತನಾಗಿರುವ ಆರೋಪಿ ಜಾವೇದ್‌ಗೆ ಅಲಾಹಾಬಾದ್‌ ಹೈಕೋರ್ಟ್‌ ಬುಧವಾರ ಜಾಮೀನು ನಿರಾಕರಿಸಿದೆ.

ಗೋವು ಭಾರತದ ಸಂಸ್ಕೃತಿಯ ಭಾಗವಾಗಿದೆ. ಅದನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಹೇಳಿದೆ. ಗೋವಿಗೆ ಮೂಲಭೂತ ಹಕ್ಕು ಕಲ್ಪಿಸುವ ಸಂಬಂಧ ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ಮಸೂದೆ ಮಂಡಿಸಬೇಕು ಎಂದಿರುವ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ನೇತೃತ್ವದ ಏಕಸದಸ್ಯ ಪೀಠವು, ಗೋವಿಗೆ ಸಮಸ್ಯೆ ಉಂಟು ಮಾಡುವವರಿಗೆ ಶಿಕ್ಷೆ ವಿಧಿಸುವ ಸಂಬಂಧ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದಿದೆ.

ಮೂಲಭೂತ ಹಕ್ಕು ಕೇವಲ ಗೋಮಾಂಸ ಭಕ್ಷಕರ ಪ್ರಮಾಧಿಕಾರ ಎಂದು ಪರಿಗಣಿಸಲು ಸಾಧ್ಯವಿಲ್ಲ. ಹಸು ವಯಸ್ಸಾದಾಗ ಮತ್ತು ಅನಾರೋಗ್ಯದಿಂದ ಇದ್ದಾಗ ಕೂಡ ಅದು ಉಪಯುಕ್ತವಾಗಿದೆ. ಸಗಣಿ ಮತ್ತು ಮೂತ್ರ ಕೃಷಿಗೆ, ಔಷಧಿಗಳ ತಯಾರಿಕೆಗೆ ತುಂಬಾ ಉಪಯುಕ್ತವಾಗಿದೆ. ಗೋವನ್ನು ಹೆಚ್ಚಾಗಿ ತಾಯಿಯಂತೆ  ಪೂಜಿಸಲ್ಪಡುತ್ತದೆ, ತಾಯಿಯಾಗಿ ಪೂಜಿಸಲ್ಪಡುವವ ವೃದ್ದೆ ಅನಾರೋಗ್ಯಕ್ಕೆ ಒಳಗಾಗುತ್ತಾಳೆ, ಅವಳನ್ನು ಕೊಲ್ಲುವ ಹಕ್ಕು ಯಾರಿಗೂ ನೀಡಲಾಗುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.

ಹಸುಗಳ ಮಹತ್ವವನ್ನು ಕೇವಲ ಹಿಂದೂಗಳು ಮಾತ್ರವಲ್ಲ. ಮುಸ್ಲಿಮರು ತಮ್ಮ ಆಳ್ವಿಕೆಯಲ್ಲಿ ಭಾರತದ ಸಂಸ್ಕೃತಿಯ ಭಾಗವೆಂದು ಪರಿಗಣಿಸಿ, ಗೋಹತ್ಯೆಯನ್ನು ನಿಷೇಧಿಸಿದ್ದರು. ಭಾಬರ್, ಹುಮಾಯೂನ್ ಮತ್ತು ಆಕ್ಬರ್ ತಮ್ಮ ಧಾರ್ಮಿಕ ಹಬ್ಬಗಳಲ್ಲಿ ಹಸುಗಳನ್ನು ಬಲಿ ನೀಡುವುದನ್ನು ನಿಷೇಧಿಸಿದ್ದರು.

ಇದನ್ನು ಒದಿ : https://cnewstv.in/?p=5715

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*