Cnewstv.in / 03.09/2021 /ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಸೆ.5 ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ ಮಾಡುವ ಮೂಲಕ ಹೊಸ ಶಿಷ್ಯವೇತನ ಯೋಜನೆಗೆ ಚಾಲನೆ ನೀಡುವರು.
ಮೆಟ್ರಿಕ್ ವಿದ್ಯಾಭ್ಯಾಸ ಪೂರ್ಣಗೊಳಿಸಿ ಅಧಿಕೃತ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕೋರ್ಸ್‍ಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ರೈತರ ಮಕ್ಕಳಿಗೆ ನೇರ ನಗದು ವರ್ಗಾವಣೆ ಮೂಲಕ ಶಿಷ್ಯ ವೇತನ ಪಾವತಿ ಮಾಡುವ ಯೋಜನೆ ಇದಾಗಿದೆ. ರೈತರ ಮಕ್ಕಳು ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತಹ ಹೊಸ ಶಿಷ್ಯ ವೇತನ ಯೋಜನೆ ಒಳಗೊಂಡಂತೆ ಒಂದು ಶಿಷ್ಯ ವೇತನಕ್ಕೆ ಮಾತ್ರ ಅರ್ಹರಾಗಿರುತ್ತಾರೆ. ತಂದೆ ತಾಯಿ ಇಬ್ಬರೂ ಕೃಷಿ ಜಮೀನಿನ ಒಡೆಯರಾಗಿದ್ದರೆ ಈ ಯೋಜನೆಯಲ್ಲಿ ಒಂದು ಶಿಷ್ಯ ವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.ಶಿಷ್ಯ ವೇತನವು ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಸ್ಟರ್/ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿದ್ದು, ಯಾವುದಾದರೂ ಒಂದು ಕೋರ್ಸ್‍ಗೆ ಮಾತ್ರ ನೀಡಲಾಗುವುದು.
ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಶಿವಮೊಗ್ಗ ಜಿಲ್ಲೆಯ ರೈತ ಕುಟುಂಬದ 5 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಜಿಲ್ಲೆಯ ರೈತರು ಕೃಷಿ ಇಲಾಖೆಯ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಣೆ ಮಾಡಬಹುದು ಎಂದು ಕೃಷಿ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=5734
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv