Cnewstv.in / 04.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಶಿವಮೊಗ್ಗ ನಗರದ ನಡುರಸ್ತೆಯಲ್ಲೇ ಅಡುಗೆ ಮಾಡುವ ಮೂಲಕ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ನಗರದ ಮಹಾವೀರ್ ಸರ್ಕಲ್ ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಡುಗೆ ಮಾಡುವಂತಹ ಅಣುಕು ಪ್ರದರ್ಶನ ಮಾಡಿದರು. ದಿನೇ ದಿನೇ ಪೆಟ್ರೋಲ್, ಡೀಸೆಲ್ಣ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿ, ಕೇಂದ್ರ ಸರ್ಕಾರ ಜನರಿಗೆ ಬರೆ ಹಾಕುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.
ನರೇಂದ್ರ ಮೋದಿ ಮತ್ತು ಅಮಿತ್ ಷಾ ಭಾವಚಿತ್ರಕ್ಕೆ ಬೆಂಕಿ ಹಚ್ಚಿದರು ನಂತರ ಭಾವಚಿತ್ರಗಳನ್ನು ಉರಿಯುತ್ತಿದ್ದ ಒಲೆಗೆ ಹಾಕಿದರು.
ಇದನ್ನು ಒದಿ : https://cnewstv.in/?p=5749
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv