Breaking News

ಲೋಕೋಪಯೋಗಿ ಸಚಿವರ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಣೆ ಆರೋಪ, ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರಾದ ಅರ್. ಪ್ರಸನ್ನಕುಮಾರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.‌

Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಶಿಷ್ಟಾಚಾರ ಉಲ್ಲಂಘಣೆ ಆರೋಪದ ಅಡಿ, ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರಾದ ಅರ್ ಪ್ರಸನ್ನಕುಮಾರ್ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ರೈಲ್ವೆ ಮೇಲ್ಸೇತುವೆ, ನೂತನ ಸೇತುವೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಇಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ  ವಿಧಾನಪರಿಷತ್ ಸದಸ್ಯರಾದ ಪ್ರಸನ್ನಕುಮಾರ ಹಾಗೂ ಕಾಂಗ್ರೆಸ್ ಸ್ಥಳೀಯ ಕಾಂಗ್ರೆಸ್ ಪ್ರತಿನಿಧಿಗಳಿಗೆ ಆಹ್ವಾನ ನೀಡಿರಲಿಲ್ಲ. ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ಪ್ರಸನ್ನಕುಮಾರ್ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ, ಧಿಕ್ಕಾರ ಕೂಗಿ ಪ್ರತಿಭಟಿಸಿದರು.

ಮಧ್ಯಪ್ರವೇಶಿಸಿದ ಪೊಲೀಸರು ಮನವೊಲಿಸಲು ಯತ್ನಿಸಿದರು ಸಹ ಪ್ರಯೋಜನವಾಗಿಲ್ಲ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೋಲಿಸರು ಪೊಲೀಸರು 20ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯ ಆರ್ ಸಿ. ನಾಯ್ಕ್, ಯಮುನಾ‌ ರಂಗೇಗೌಡ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ರಾಜ್ಯಕಾರ್ಯದರ್ಶಿ ಕೆ. ಚೇತನ್, ಹಾಗೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನು ಓದಿ : https://cnewstv.in/?p=5770

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*