Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ವೃತ್ತಿಪರತೆ, ಕೌಶಲ್ಯತೆ, ಸಂಸ್ಕøತಿ ಮತ್ತು ಆರ್ಥಿಕ ಸಬಲತೆ ನೀಡುವ ಶಿಕ್ಷಣ ನಮ್ಮದಾಗಬೇಕೆಂಬ ಉದ್ದೇಶದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಶಿಕ್ಷಕರಾದಿಯಾಗಿ ಎಲ್ಲರೂ ಈ ಬಗ್ಗೆ ಅಧ್ಯಯನ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರೀಯ ವಿಚಾರಗಳು, ನಮ್ಮ ನಾಡಿನ ಸಂಸ್ಕøತಿ ಜೊತೆಗೆ ತಾಂತ್ರಿಕತೆಗೆ ಒತ್ತು ನೀಡುವ ಶಿಕ್ಷಣ ನೀತಿ ಇದಾಗಿದೆ. ಪರ ವಿರೋಧ ಎಲ್ಲೆಡೆ ಇರುತ್ತದೆ. ಆದರೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದ ಶಿಕ್ಷಣ ನೀತಿಯನ್ನು ಎಲ್ಲರೂ ತಿಳಿದು ಅನುಷ್ಠಾನಗೊಳಿಸಬೇಕೆಂದರು.
ಇದನ್ನು ಓದಿ : https://cnewstv.in/?p=5778
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments