Cnewstv.in / 07.09.2021 / ಮಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮಂಗಳೂರು : ಎರಡು ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಇದೀಗ ಮತ್ತೆ ಕೇರಳದಲ್ಲಿ ಕಾಣಿಸಿಕೊಳ್ಳುತ್ತಿದೆ. ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ದ.ಕ. ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ ಮಾಡಿದ್ದಾರೆ.
ಗಡಿ ಜಿಲ್ಲೆ ಯಾಗಿರುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಜನರು ಆಸ್ಪತ್ರೆಗಳಿಗೆ ಬರುತ್ತಾರೆ . ಶಿಕ್ಷಣಕ್ಕೆ ಸಂಬಂಧಿಸಿದಂತೆ ಅನೇಕ ಶಿಕ್ಷಣ ಸಂಸ್ಥೆಗಳಿಗೆ ಸಾಕಷ್ಟು ಜನರು ಬರುತ್ತಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಅಲರ್ಟ್ ಘೋಷಿಸಲಾಗಿದ್ದು ಸಂಬಂಧಪಟ್ಟವರು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಸೂಚಿಸಿದ್ದಾರೆ.
ಇದನ್ನು ಓದಿ : https://cnewstv.in/?p=5813
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments