Cnewstv.in / 07.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ಸೆಪ್ಟೆಂಬರ್ 14 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ : 0821-2515944 / 9964760090 ನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.
ಇದನ್ನು ಓದಿ : https://cnewstv.in/?p=5825
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv