Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ವಿಐಎಸ್ ಎಲ್ ಹಾಗೂ ಎಂಪಿಎಂ ಉಳಿಸುವಂತೆ ವಿಭಿನ್ನವಾಗಿ ಪತ್ರ ಚಳುವಳಿಯನ್ನು ಮಾಡಿದ್ದರು.
ಭದ್ರಾವತಿಯ ಯುವ ಮುಖಂಡ ಗಣೇಶ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದ ಪ್ರಧಾನ ಅಂಚೆ ಕಛೇರಿಯ ಎದುರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜಿಲ್ಲೆಯ ಕೈಗಾರಿಕೆಗಳನ್ನು ಉಳಿಸುವಂತೆ ಒತ್ತಾಯಿಸಿದರು.
ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿದ್ದ ಕಾರ್ಖಾನೆಯಲ್ಲಿ ಇನ್ನಷ್ಟು ಉತ್ತುಂಗ ಸ್ಥಿತಿಗೆ ಕೊಂಡೊಯ್ಯಬಹುದಾದ ದೃಷ್ಟಿಯಿಂದ ಕೇಂದ್ರ ಸರ್ಕಾರದ ಎಸ್.ಎ.ಐ.ಎಲ್ ನಲ್ಲಿ ವಿಲೀನಗೊಳಿಸಲಾಗಿತ್ತು. ಆದರೆ ಕೆಲ ದಿನಗಳಲ್ಲಿ ಕಾರ್ಖಾನೆಯನ್ನು ಉತ್ತುಂಗದ ಸ್ಥಿತಿಗೆ ಕೊಂಡೊಯ್ಯುವ ಬದಲಾಗಿ ನಷ್ಟದ ನೆಪವೊಡ್ಡಿ ಮುಚ್ಚಲು ಸರ್ಕಾರ ಹುನ್ನಾರ ನಡೆಸುತ್ತಿರುವುದನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನಿಂದ ಖಂಡಿಸಲಾಯಿತು.

ಆದಷ್ಟು ಬೇಗ ಅವಳಿ ಕಾರ್ಖಾನೆಯ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ಇದೇ ಸಂದರ್ಭದಲ್ಲಿ ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಚೇತನ್ ಕೆ. ಮಹಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ಮಧುಸೂದನ್, ಪ್ರಸನ್ನ, ಬಾಲಾಜಿ, ವಿನಯ್ ಮುಂತಾದವರು ಉಪಸ್ಥಿತರಿದ್ದರು.
ಇದನ್ನು ಓದಿ : https://cnewstv.in/?p=5844
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv