Breaking News

ಸೆ.13ರಂದು ರೈತಸಂಘದಿಂದ ವಿಧಾನಸೌಧ ಮುತ್ತಿಗೆ – ಹೆಚ್.ಆರ್. ಬಸವರಾಜಪ್ಪ.

Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಸೆಪ್ಟೆಂಬರ್ 13ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಹೆಚ್,ಅರ್,ಬಸವರಾಜಪ್ಪ ನವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರೈತವಿರೋಧಿ ಕೃಷಿ ಕಾಯ್ದೆಯನ್ನು ಕೈಬಿಡಬೇಕು. ಕೃಷಿ ಮಾರುಕಟ್ಟೆ ಕಾಯ್ದೆ ಭೂಸ್ವಾಧೀನ ಕಾಯ್ದೆ ಎಲ್ಲವನ್ನೂ ಕೂಡ ತಡೆಹಿಡಿಯಬೇಕು ಹಾಗೂ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಕಾಯ್ದೆಗಳನ್ನು ಕೈಬಿಡಬೇಕೆಂದು ಆಗ್ರಹಿಸಿರುವ ದಿನವೇ ವಿಧಾನಸೌಧ ಮುತ್ತಿಗೆಯನ್ನು ಹಮ್ಮಿಕೊಳ್ಳಲಾಗಿದೆ.

ಮುತ್ತಿಗೆ ಕಾರ್ಯಕ್ರಮಕ್ಕೆ ನಮ್ಮ ಜಿಲ್ಲೆಯಿಂದ ಒಂದು ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪೊಲೀಸರು ನಮ್ಮನ್ನು ಬಂಧಿಸುವ ಸಾಧ್ಯತೆ ಕೂಡ ಇದೆ, ಅದಕ್ಕೆ ಬೇಕಾದ ತಂತ್ರವನ್ನು ಕೂಡ ನಮ್ಮ ಸಂಘಟನೆ ರೂಪಿಸಿದೆ ಈ ಮುತ್ತಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಇದನ್ನು ಓದಿ : https://cnewstv.in/?p=5851

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*