Cnewstv.in /11.09.2021/ ಹೈದರಾಬಾದ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಹೈದರಾಬಾದ್ : ತೆಲುಗಿನ ಖ್ಯಾತ ಚಿತ್ರನಟ ಸಾಯಿ ಧರ್ಮತೇಜ್ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೈದರಾಬಾದ್ ನಾ ಕೇಬಲ್ ಬ್ರಿಡ್ಜ್ ಬಳಿ ಸ್ಪೋರ್ಟ್ಸ್ ಬೈಕಿನಲ್ಲಿ ಜೋರಾಗಿ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
ಸಾಯಿ ಧರ್ಮತೇಜ ಸದ್ಯ ಜುಬಿಲಿ ಹಿಲ್ಸ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಯಿ ಧರ್ಮತೇಜ್ ತಲೆಗೆ ಹೆಲ್ಮೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೂ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನು ಓದಿ : https://cnewstv.in/?p=5872
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments