Breaking News

Earthquake: ಒಂದು ವಾರದಲ್ಲಿ ಎರಡು ಬಾರಿ ಭೂಮಿ ಕಂಪಿಸಿದ ಅನುಭವ. ಜನರಲ್ಲಿ ಆತಂಕ.

Cnewstv.in /11.09.2021/ ವಿಜಯಪುರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ವಿಜಯಪುರ : ಜಿಲ್ಲೆಯಲ್ಲಿ ಇಂದು ಮುಂಜಾನೆ 8.20ರ ಸಮಯಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಜನರಲ್ಲಿ ಆತಂಕ ಮನೆಮಾಡಿದೆ.

ಕಳೆದ ವಾರ ಸೆಪ್ಟಂಬರ್ 4 ರಂದು ರಾತ್ರಿ ಸಮಯದಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪನ ಅನುಭವಾಗಿದೆ. ರಿಕ್ಟರ್ ಮಾಪನದಲ್ಲಿ 3.9 ರಷ್ಟು ತೀವ್ರತೆ ದಾಖಲಾಗಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಘಟಕದ ಭೂಗರ್ಭ ತಜ್ಞರು ಭೂಕಂಪನದ ಬಗ್ಗೆ ಅಧ್ಯಯನ ನಡೆಸಿ ಇದು ಮಹಾರಾಷ್ಟ್ರದ ಕೊಲ್ಲಾಪುರ ಬಳಿ ಕೇಂದ್ರಬಿಂದುವಾಗಿದೆ‌ ಇದರ ಭಾಗಶಃ ಪರಿಣಾಮ ಜಿಲ್ಲೆಗೆ ಆಗಿದೆ ಇದರಿಂದ ಜನರು ಭಯಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ ಇಂದು ಮುಂಜಾನೆ ಮತ್ತು ಭೂಕಂಪನದ ಅನುಭವ ವಾಗಿರುವುದು ಜನರಿಗೆ ಮತ್ತಷ್ಟು ಆತಂಕ ಉಂಟುಮಾಡಿದೆ‌‌.

ಇದನ್ನು ಓದಿ : https://cnewstv.in/?p=5879

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*