Cnewstv.in /11.09.2021/ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನವದೆಹಲಿ : ರಾಜಧಾನಿ ದೆಹಲಿಯಲ್ಲಿ ದಾಖಲೆಯ ಪ್ರಮಾಣದಲ್ಲಿ ಧಾರಾಕಾರ ಮಳೆಯಾಗಿದೆ. ವರುಣನ ಆರ್ಭಟಕ್ಕೆ ರಸ್ತೆಗಳು ಜಲಾವೃತವಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದಿರಾ ಗಾಂಧಿ ವಿಮಾನನಿಲ್ದಾಣ ಜಲಾವೃತಗೊಂಡಿದೆ.
ಜೋರು ಮಳೆಯಿಂದಾಗಿ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ನೀರು ತುಂಬಿಕೊಂಡಿದೆ. ವಿಮಾನ ನಿಲ್ದಾಣದಲ್ಲಿ ಭಾಗಶಃ ನೀರಿನಿಂದ ಮುಳುಗಡೆಯಾಗಿದೆ. ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
ಹವಾಮಾನ ಇಲಾಖೆಯು ದೆಹಲಿಯಲ್ಲಿ ಶುಕ್ರವಾರ
ಮಳೆಯಾಗುವ ಮುನ್ಸೂಚನೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಿಸಿತ್ತು. ಆದರೆ ನಿರೀಕ್ಷೆಗೂ ಮೀರಿ ಮಳೆಯಾಗಿದ್ದು ಬರೋಬ್ಬರಿ 1000 ಮಿಲಿಮೀಟರ್ ನಷ್ಟು ಮಳೆಯಾಗಿದೆ.
ಇದನ್ನು ಓದಿ : https://cnewstv.in/?p=5881
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv