Breaking News

ಪೌರಕಾರ್ಮಿಕರ ಕ್ರೀಡಾಕೂಟ

Cnewstv.in / 13.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಪೌರ ಕಾರ್ಮಿಕ ದಿನಾಚರಣೆಯ ಅಂಗವಾಗಿ ನಗರದ ನೆಹರು ಕ್ರೀಡಾಂಗಣದಲ್ಲಿ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಯಿತು. ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಉದ್ಘಾಟನೆ ಮಾಡಿದ್ದರು.

ಪೌರಕಾರ್ಮಿಕರನ್ನು ಹುರಿದುಂಬಿಸುವ ಉದ್ದೇಶಕ್ಕಾಗಿ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ. ಕೊರೊನಾ ಸಂದರ್ಭದಲ್ಲಿ ಪೌರಕಾರ್ಮಿಕರು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಪೌರಕಾರ್ಮಿಕರ ಸೇವೆ ಅನನ್ಯ. ಎಲ್ಲರೂ ಅದನ್ನು ಮಾಡಲು ಸಾಧ್ಯವಿಲ್ಲ. ಪೌರಕಾರ್ಮಿಕರ ಸಹಕಾರ ಎಲ್ಲಾ ಪಾಲಿಕೆ ಸದಸ್ಯರಿಗೆ ಬೇಕು ಎಂದರು.

ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಉಪಮೇಯರ್ ಶಂಕರ್ ಗನ್ನಿ, ಪಾಲಿಕೆಯ ನೌಕರ ಸಂಘದ ಅಧ್ಯಕ್ಷ ಮಾರಪ್ಪ, ವಿಶ್ವಾಸ್, ಸುರೇಖಾ ಮುರಳಿಧರ್, ರೇಖಾ ರಂಗನಾಥ್, ಶಿವಕುಮಾರ್, ಹಾಗೂ ಇತರ ಮಹಾನಗರಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

ಇದನ್ನು ಓದಿ : https://cnewstv.in/?p=5909

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*