Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 25,404. ಸತತ 3 ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ 30,000 ಕ್ಕಿಂತ ಕಡಿಮೆ ಅಗಿದೆ.

Cnewstv.in / 14.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 25,404 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 399 ಜನರು ಸಾವನ್ನಪ್ಪಿದ್ದಾರೆ.

37,687 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,62,207 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,24,84,159ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇ. 97.51 ರಲ್ಲಿದೆ.

ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ 12,062 ರಷ್ಟು ಇಳಿಕೆ ಯಾಗಿದೆ. ಇಲ್ಲಿಯವರೆಗೆ 75.22 ಕೋಟಿ ಲಸಿಕೆ ಡೋಸ್ ಗಳನ್ನು ನೀಡಲಾಗಿದೆ.

ಇದನ್ನು ಓದಿ : https://cnewstv.in/?p=5919

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*