Breaking News

ಮಕ್ಕಳನ್ನು ಸರಿದಾರಿಗೆ ತರುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ : ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್

Cnewstv.in / 14.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಪ್ರಸ್ತುತ ದಿನಮಾನಗಳಲ್ಲಿ ಹದಿ ವಯಸ್ಸಿನ ಮಕ್ಕಳೇ ತಂಬಾಕು ಉತ್ಪನ್ನಗಳ ಚಟಕ್ಕೆ ಒಳಗಾಗುತ್ತಿದ್ದು, ಮಕ್ಕಳನ್ನು ಸರಿದಾರಿಗೆ ತರುವಲ್ಲಿ ಶಾಲೆಗಳ ಶಿಕ್ಷಕರು ಸೇರಿದಂತೆ ನಮ್ಮೆಲ್ಲರ ಜವಾಬ್ದಾರಿ ಇದೆ. ಈ ನಿಟ್ಟಿನಲ್ಲಿ ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್ ಕರೆ ನೀಡಿದರು.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ 2003 ರ ಕಾಯ್ದೆಯ ಪರಿಣಾಮಕಾರಿ ಅನುಷ್ಟಾನ ಕುರಿತು ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಇಂದು ನಗರದ ಐಎಂಎ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನು ಓದಿ : https://cnewstv.in/?p=5922

ದೇಶದ ಅಭಿವೃದ್ದಿಗೆ ಬುನಾದಿಯಾಗಿರುವ ಇಂದಿನ ಮಕ್ಕಳು ಮತ್ತು ಯುವಜನತೆ ತಂಬಾಕು ಉತ್ಪನ್ನಗಳ ಚಟ, ಡ್ರಗ್ಸ್‍ನಂತಹ ಮಾದಕ ದ್ರವ್ಯಗಳ ವ್ಯಸನಕ್ಕೆ ಗುರಿಯಾಗುತ್ತಿರುವುದು ಖೇದಕರ ಸಂಗತಿಯಾಗಿದೆ. ಮಕ್ಕಳು ಈ ರೀತಿ ಮಾದಕ ದ್ರವ್ಯಗಳಿಗೆ ಒಳಗಾಗಲು ಕಾರಣವನ್ನು ಕಂಡು ಹಿಡಿದು, ಮೂಲದಲ್ಲಿಯೇ ಇದರಿಂದ ಅವರನ್ನು ರಕ್ಷಿಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಲಿದೆ. ಆದ ಕಾರಣ ಮಾದಕ ವ್ಯಸನಕ್ಕೆ ಮುಖ್ಯದ್ವಾರವಾಗಿರುವ ಸಿಗರೇಟ್ ಅಥವಾ ಯಾವುದೇ ತಂಬಾಕು ಸೇವನೆಗೆ ಮಕ್ಕಳು ತುತ್ತಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಹದಿವಯಸ್ಸಾದ 14 ರಿಂದ 18 ವಯಸ್ಸಿನಲ್ಲಿ ರೂಢಿಸಿಕೊಂಡ ಹವ್ಯಾಸಗಳೇ ಅವರ ಜೀವನದ ಪೂರ್ತಿ ಉಳಿಯುವ ಕಾರಣ ಈ ವಯಸ್ಸಿನಲ್ಲಿ ಅವರು ಮಾದಕ ವ್ಯಸನಕ್ಕೆ ಒಳಗಾಗದಂತೆ ಪೋಷಕರು ಮತ್ತು ಶಾಲೆಗಳಲ್ಲಿ ಶಿಕ್ಷಕರು ನಿಗಾ ವಹಿಸಬೇಕು.

ಮಕ್ಕಳು ಸಾಮಾನ್ಯವಾಗಿ ಒಂದು ಹೊಸ ಅನುಭವ, ಸ್ವಾಧ ಅನುಭವಿಸಲು ಹಾಗೂ ಇತರೆ ಕಾರಣಗಳಿಂದ ಸಿಗರೇಟ್ ಅಥವಾ ತಂಬಾಕು ಸೇವನೆಗೆ ಪ್ರವೇಶಿಸುತ್ತಾರೆ. ಮುಂದೆ ಅದು ಡ್ರಗ್ಸ್, ಕುಡಿತ ಇತರೆ ಮಾದಕ ದ್ರವ್ಯಗಳ ಸೇವನೆಯೆಡೆ ಕರೆದುಕೊಂಡು ಹೋಗುತ್ತದೆ. ಆದ ಕಾರಣ ಮೂಲದಲ್ಲಿಯೇ ಈ ವ್ಯಸನಕ್ಕೆ ತಡೆ ಹಾಕಬೇಕು.

ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಚಲನವಲನ, ಚಟುವಟಿಕೆಗಳನ್ನು ಗಮನಿಸಬೇಕು. ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಒಂದು ಪಕ್ಷ ಮಕ್ಕಳು ಮಾತು ಕೇಳುತ್ತಿಲ್ಲವೆಂದಾದರೆ ಪೊಲೀಸ್ ಇಲಾಖೆಗೆ ತಿಳಿಸಿ, ನಾವು ಸಹಕರಿಸುತ್ತೇವೆ. ಈಗ ಶಾಲೆಗಳು ಆರಂಭವಾಗಿದ್ದು ಇಲಾಖೆ ವತಿಯಿಂದ ಶಾಲೆಗಳ ಭೇಟಿ ನೀಡಿ ಮಕ್ಕಳಿಗೆ ಮಾದಕ ವ್ಯಸನ ದುಷ್ಪರಿಣಾಮ ಕುರಿತು ಮನವರಿಕೆ ಮಾಡಲಾಗುವುದು ಎಂದರು.

ಬಹುತೇಕ ಅಪರಾಧ ಪ್ರಕರಣಗಳ ಅಪರಾಧಿಗಳು ಮಾದಕ ವ್ಯಸನಿಗಳಾಗಿರುತ್ತಾರೆ. ಹಾಗೂ ವಾರ್ಷಿಕವಾಗಿ ಸರಾಸರಿ 5500 ಅಪರಾಧ ಪ್ರಕರಣ ದಾಖಲಾಗುತ್ತಿದ್ದು ಈ ಪೈಕಿ ಶೇ.90 ಅಪರಾಧಿಗಳು, ಶಾಲೆ ಬಿಟ್ಟ ಮಕ್ಕಳಾಗಿರುತ್ತಾರೆ. ಆದ ಕಾರಣ ಮಕ್ಕಳು ಶಾಲೆ ಬಿಡದಂತೆ ನೋಡಿಕೊಳ್ಳಬೇಕು. ಶೈಕ್ಷಣಿಕವಾಗಿ ಮುಂದುವರೆಯುಂತೆ ಶಿಕ್ಷಕರು, ಮುಖ್ಯೋಪಾಧ್ಯಾಯರು ಕ್ರಮ ವಹಿಸಬೇಕು. ಹಾಗೂ ಶಾಲಾ ಸುತ್ತಮುತ್ತ ಮತ್ತು ಎಲ್ಲೆಡೆ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕೆಂದರು.

ಎನ್.ಟಿ.ಪಿ.ಸಿ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಮಲ್ಲಪ್ಪ.ಓ ಪ್ರಾಸ್ತಾವಿಕ ಮಾತನಾಡಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಶಿಕ್ಷಕರು, ಆರೋಗ್ಯ ಇಲಾಖೆಯ ವೈದ್ಯರು, ಪೊಲೀಸರು, ಸಿಬ್ಬಂದಿಗಳು, ಹೋಟೆಲ್, ಬಾರ್, ರೆಸ್ಟೋರೆಂಟ್ ಮಾಲೀಕರು ಸೇರಿದಂತೆ ವಿವಿಧ ವಲಯದ ಅಧಿಕಾರಿ/ಸಿಬ್ಬಂದಿಗಳಿಗೆ ಕಾಯ್ದೆ ಮತ್ತು ತಂಬಾಕು ದುಷ್ಪರಿಣಾಮದ ಬಗ್ಗೆ ನಿಯಮಿತವಾಗಿ ತರಬೇತಿ ನೀಡಲಾಗುವುದು.

ಪ್ರತಿ ವರ್ಷ ಶೇ.17 ರಿಂದ 20 ರಷ್ಟು ಹದಿವಯಸ್ಸಿನ ಮಕ್ಕಳು ತಂಬಾಕು ಚಟಕ್ಕೆ ಬಲಿಯಾಗುತ್ತಿದ್ದು, ಇದನ್ನು ತಡೆಯಲು ಮುಖ್ಯವಾಗಿ ಶಾಲಾ ಕಾರ್ಯಕ್ರಮದಡಿ ಮಕ್ಕಳಿಗೆ ತಂಬಾಕಿನ ದುಷ್ಪರಿಣಾಮ ಕುರಿತು ಚಿತ್ರಕಲೆ, ಪ್ರಬಂಧ ಇತರೆ ಚಟುವಟಿಕೆ ಹಮ್ಮಿಕೊಂಡು ಪ್ರಶಸ್ತಿ, ಬಹುಮಾನ ನೀಡಲಾಗುತ್ತಿದೆ.

ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ನಿಯಮಿತವಾಗಿ ತಂಬಾಕು ದಾಳಿ ನಡೆಸಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುತ್ತಿದೆ. ಶಾಲೆಗಳ 100 ಗಜದೊಳಗೆ ಯಾವುದೇ ತಂಬಾಕು ಅಂಗಡಿ, ಕೇಂದ್ರಗಳು ಇರದಂತೆ, ತಂಬಾಕುಮುಕ್ತ ಶಾಲೆ ನಾಮಫಲಕ, ಸಾರ್ವಜನಿಕ ಧೂಮಪಾನ, ಪ್ರದರ್ಶನ ನಿಷೇಧ ಸೇರಿದಂತೆ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. 2016 ನೇ ಸಾಲಿನಿಂದ ಈವರೆಗೆ 7400 ಕ್ಕೂ ಹೆಚ್ಚು ಪ್ರಕರಣ ದಾಖಲಿಸಿ ರೂ.4,34,000 ದಂಡ ಸಂಗ್ರಹಿಸಲಾಗಿದೆ.

ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯಲ್ಲಿ ತಂಬಾಕು ವಸ್ಯನ ಮುಕ್ತ ಕೇಂದ್ರ ಆರಂಭಿಸಲಾಗಿದ್ದು ಇಲ್ಲಿ ತಂಬಾಕು ಗೀಳಿನಿಂದ ಬಿಡುಗಡೆ ಪಡೆಯಲು ಆಪ್ತಸಮಾಲೋಚನೆ, ಚಿಕಿತ್ಸೆ ನೀಡಲಾಗುತ್ತಿದ್ದು ಈವರೆಗೆ 8 ಸಾವಿರಕ್ಕೂ ಅಧಿಕ ಜನರು ಇದರ ಅನುಕೂಲ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನು ಓದಿ : https://cnewstv.in/?p=5922

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments