Breaking News

ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Cnewstv.in / 15.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ರೇಷ್ಮೆ ಇಲಾಖೆ ವತಿಯಿಂದ 2020-21 ನೇ ಸಾಲಿನ ಜಿಲ್ಲಾ ಮಟ್ಟದ ರೇಷ್ಮೆ ಪ್ರಶಸ್ತಿ ನೀಡಲು ಉತ್ತಮ ಪ್ರಗತಿ ಸಾಧಿಸಿರುವ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ರೇಷ್ಮೆ ಬೆಳೆಗಾರರು ಕನಿಷ್ಟ 1.00 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆಗೂಡಿನ ಇಳುವರಿ 65 ಕೆ.ಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ. ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ/ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನನು ಹೊಂದಿರಬೇಕು.

ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು/ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಮತ್ತು ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 30 ರೊಳಗೆ ಉಪ ನಿರ್ದೇಶಕರು, ರೇಷ್ಮೆ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ ಈ ಕಚೇರಿ ಸಲ್ಲಿಸಬೇಕೆಂದು ರೇಷ್ಮೆ ಉಪನಿರ್ದೇಶಕರು ತಿಳಿಸಿದ್ದಾರೆ.

ಇದನ್ನು ಓದಿ : https://cnewstv.in/?p=5958

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*