Job : ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ.

Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ 2021-22 ನೇ ಸಾಲಿಗೆ ಉದ್ಯೋಗಿನಿ ಯೋಜನೆಯಡಿ ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿ ಕೈಗಾರಿಕೆ ಇತ್ಯಾದಿ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಸಹಾಯಧನ ನೀಡಲು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು ವಯಸ್ಸಿನ ದೃಢೀಕರಣಕ್ಕಾಗಿ ಚುನಾವಣಾ ಗುರುತಿನ ಚೀಟಿ, ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಅಥವಾ ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕು. ಕುಟುಂಬದ ವಾರ್ಷಿಕ ಆದಾಯ ಎಸ್‍ಸಿ/ಎಸ್‍ಟಿ ರೂ.2 ಲಕ್ಷ, ವಿಶೇಷ ವರ್ಗ ಹಾಗೂ ಸಾಮಾನ್ಯ ವರ್ಗದ ಮಹಿಳೆಯರಿಗೆ ರೂ.1.50 ಲಕ್ಷ ಮೀರಬಾರದು. ವಿಧವರೆಯರು, ಸಂಕಷ್ಟಕ್ಕೊಳಗಾದ ಮಹಿಳೆಯರು, ಅಂಗವಿಕಲ ಮಹಿಳೆಯರಿಗೆ ಆದಾಯ ಮಿತಿ ಇರುವುದಿಲ್ಲ. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಸಾಲ ಮಂಜೂರಾಗಿ ಬಿಡುಗಡೆಯ ಮುನ್ನ ಫಲಾನುಭವಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕಡೆಯ ದಿನವಾಗಿದ್ದು, ಅರ್ಜಿ ಹಾಗೂ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಅಥವಾ ಆಯಾ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಹಾಗೂ ಮೊ.ಸಂ: 9482031284, 9901755700 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಸುರೇಶ್ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=6006

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*