ನಟ ದರ್ಶನ್ ಫಾರಂ ಹೌಸ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ಎಫ್ಐಆರ್ ದಾಖಲು.

Cnewstv.in / 18.09.2021 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಮೈಸೂರು : ಚಿತ್ರನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆತನದ ಫಾರಂ ಹೌಸ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ದೂರಿನ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ದರ್ಶನ್ ಒಡೆತನದ ಟಿ.ನರಸೀಪುರ ರಸ್ತೆಯಲ್ಲಿರುವ ವಿನೇಶ್ ಫಾರಂ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬವೊಂದರ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಬಾಲಕಿಯ ತಾಯಿ ಪೋಲಿಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ.

ಶಿವಮೊಗ್ಗದಿಂದ ಬಂದ ಕುಟುಂಬವೊಂದು ವಿನೇಶ್ ಫಾರಂ ಹೌಸ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕುಟುಂಬದಲ್ಲಿ ತಂದೆ, ತಾಯಿ, ಮಗಳು ಹಾಗೂ ಒಬ್ಬ ಮಗನಿದ್ದನು. ಸೆಪ್ಟೆಂಬರ್ 13ರಂದು ಸೋಮವಾರ ರಾತ್ರಿ ಅಪ್ರಾಪ್ತ ಬಾಲಕಿಯ ಮೇಲೆ ಅದೇ ತೋಟದ ಕುದುರೆ ಲಾಯದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ವ್ಯಕ್ತಿ  ಅತ್ಯಾಚಾರವೆಸಗಿದ್ದಾನೆ.

ಇದನ್ನು ಒದಿ : https://cnewstv.in/?p=6028

ಸಂತ್ರಸ್ತೆಯ ತಾಯಿ ಸೆಪ್ಟೆಂಬರ್ 15ರಂದು ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*