ಕಿಟ್ ಉಪಯೋಗಿಸಿ, ಗಾಂಜಾ ಸೇವನೆ ಪತ್ತೆಹಚ್ಚಿ, ಕೇಸು ದಾಖಲಿಸಲಾಗುವುದು – ಡಿಎಚ್ಒ ರಾಜೇಶ್ ಸುರಗೀಹಳ್ಳಿ

Cnewstv.in / 18.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ : ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಟಾ 2003 ಕಾಯಿದೆಯ ಪರಿಣಾಮಕಾರಿ ಅನುಷ್ಠಾನ ಕುರಿತು, ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಗರದ ಐಎಂಎ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಿಎಚ್ಒ ರಾಜೇಶ್ ಸುರಗೀಹಳ್ಳಿ ಅವರು, ಜಿಲ್ಲೆಯಲ್ಲಿ ಗಾಂಜಾ ಸೇವನೆ ಅತಿ ಹೆಚ್ಚಿದೆ. ಆದರೆ ಈ ಸೇವನೆ ಕುರಿತು ದಾಖಲೆಗಳಿಲ್ಲದ ಕಾರಣ ಪ್ರಕರಣ ದಾಖಲಿಸುವುದು ಕಷ್ಟವಾಗಿದೆ. ಬೆಂಗಳೂರಿನಲ್ಲಿ ಗಾಂಜಾ ಸೇವನೆ ಪತ್ತೆ ಹಚ್ಚಲು ಕಿಟ್‍ಗಳ ಮೂಲಕ ಪರೀಕ್ಷೆ ಮಾಡುವ ಪ್ರಯೋಗ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿಯೂ ಈ ಗಾಂಜಾ ಸೇವನೆ ಪತ್ತೆ ಹಚ್ಚುವ ಕಿಟ್‍ಗಳನ್ನು ಉಪಯೋಗಿಸಿ ಗಾಂಜಾ ಪ್ರಕರಣಗಳನ್ನು ದಾಖಲಿಸಿ, ಗಾಂಜಾ ಸೇವನೆಗೆ ಕಡಿವಾಣಕ್ಕೆ ಕ್ರಮ ವಹಿಸಲಾಗುವುದು.

ಇದನ್ನು ಒದಿ : https://cnewstv.in/?p=6039

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*