Breaking News

ಲಕ್ಷಾಂತರ ರೂಪಾಯಿ ಮೌಲ್ಯದ ಸ್ಮಾರ್ಟ್ ಸಿಟಿ ಕಾಮಗಾರಿ ವಸ್ತುಗಳು ಬೆಂಕಿಗಾಹುತಿ

Cnewstv.in / 19.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ : ಒ.ಟಿ ರಸ್ತೆ ಸೀಗೆಹಟ್ಟಿ ಬಳಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ಸಂಗ್ರಹಿಸಿಟ್ಟಿದ್ದ ಕೇಬಲ್ ಬಂಡಲ್ ಗಳು ಸುಟ್ಟು ಭಸ್ಮವಾಗಿದೆ.

ಬೆಂಕಿ ಅವಘಡದಲ್ಲಿ ಸುಮಾರು 60 ಲಕ್ಷ ಮೌಲ್ಯದ ಕೇಬಲ್ ಗಳು ಬೆಂಕಿಗಾಹುತಿಯಾಗಿದೆ ಎನ್ನಲಾಗುತ್ತಿದೆ. ಸಮಯಕ್ಕೆ ಸರಿಯಾಗಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಇನ್ನುಳಿದ ಲಕ್ಷಾಂತರ ರೂಪಾಯಿ ಮೌಲ್ಯದ ಕೇಬಲ್ ಗಳನ್ನು ಉಳಿಸಿದ್ದಾರೆ.

ಇದು ಯಾರೋ ಉದ್ದೇಶಪೂರಕವಾಗಿ ಮಾಡಿದ ಕೆಲಸವೋ ಅಥವಾ ಆಕಸ್ಮಿಕವಾಗಿ ಆದ ಘಟನೆಯೋ ಇನ್ನೂ ತಿಳಿದುಬಂದಿಲ್ಲ. ಘಟನೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=6054

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*