Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 30,773

Cnewstv.in / 19.09.2021 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 30,773 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 309 ಜನ ಸಾವನ್ನಪ್ಪಿದಾರೆ.

38,945 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,32,158 ಇದೆ. ರಾಷ್ಟ್ರೀಯ ಚೇತರಿಕೆಯ ಪ್ರಮಾಣ ಶೇ. 97.68 ರಷ್ಟಿದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,26,32,222 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 80,43,72,331 ಮಂದಿಗೆ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,34,48,163 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,44,838 ಕ್ಕೆ ಏರಿಕೆಯಾಗಿದೆ. ‌

ಇದನ್ನು ಒದಿ : https://cnewstv.in/?p=6056

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*