Breaking News

ರೈಲ್ವೆ ಹಳಿ ಮೇಲೆ ಮಹಿಳೆಯ ಶವ, ಆತ್ಮಹತ್ಯೆಯೋ ಆಕಸ್ಮಿಕವೋ !!??

Cnewstv.in / 19.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ರೈಲ್ವೆ ಹಳಿಯ ಮೇಲೆ ಮಹಿಳೆಯೊಬ್ಬಳ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.

ಇಂದು ಬೆಳಗ್ಗೆ ಶಿವಮೊಗ್ಗದ ಕಾಶಿಪುರ ಸಮೀಪದಲ್ಲಿ, ಮೈಸೂರು-ತಾಳಗುಪ್ಪ ರೈಲಿಗೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ. ಮೃತ ದುರ್ದೈವಿಯನ್ನು ನಾಗರತ್ನ(45) ಎಂದು ಗುರುತಿಸಲಾಗಿದೆ.

ಇಂದು ಬೆಳಗಿನ ಜಾವ ಮುಸುಕಿನಲ್ಲಿ ರೈಲ್ವೆ ಹಳಿ ದಾಟುತ್ತಿರುವಾ ಈ ಘಟನೆ ಸಂಭವಿಸಿರಬಹುದು ಎನ್ನಲಾಗುತ್ತಿದೆ. ಇದು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೇ ಎಂಬುದರ ಕುರಿತು ನಿಖರ ಮಾಹಿತಿ ಇನ್ನೂ ದೊರೆತಿಲ್ಲ.

ಈ ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : https://cnewstv.in/?p=6076

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*