Cnewstv.in / 19.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಹೊತ್ತಿ ಉರಿದ ಘಟನೆ ನಡೆದಿದೆ.
ಕಾರ್ಕಳದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ನಿಶಾನ್ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹತ್ತಿಕೊಂಡ ಸ್ವಲ್ಪ ಸಮಯದಲ್ಲೇ ಸಂಪೂರ್ಣ ಕಾರು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಯಾರಿಗೂ ಸಹ ಪ್ರಾಣಾಪಾಯವಾಗಿಲ್ಲ. ಆಗುಂಬೆ ಘಾಟಿನ ಮೊದಲನೇ ತಿರುವಿನಲ್ಲಿ ಈ ಘಟನೆ ನಡೆದಿದೆ.
ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದರು. ಕಾರು ಹೊತ್ತಿಕೊಂಡ ಪರಿಣಾಮ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಬಂದ್ ಮಾಡಲಾಗಿತ್ತು.
ಇದನ್ನು ಒದಿ : https://cnewstv.in/?p=6087
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv