Cnewstv.in / 20.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ವಿಳಾಸ ಕೇಳುವ ನೆಪದಲ್ಲಿ ಸರಗಳ್ಳತನ ಮಾಡಿದ ಘಟನೆ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಇಂದು ನಡೆದಿದೆ.
ಬೆಳಿಗ್ಗೆ 6:45ರ ಸಮಯಕ್ಕೆ ವಾಕಿಂಗ್ ಮುಗಿಸಿ, ಸ್ವಾಮಿ ವಿವೇಕಾನಂದ ಬಡಾವಣೆಯ ಚಂದನ ಪಾರ್ಕ್ ಸಮೀಪದ ಕ್ರೀಡಾಂಗಣದ ಪಕ್ಕದ ರಸ್ತೆಯಲ್ಲಿ ಕೆಪಿಸಿ ಉದ್ಯೋಗಿಯಾಗಿರುವ ಕೃಷ್ಣಮೂರ್ತಿ ಭಟ್ ಅವರನ್ನು ಬರುತ್ತಿದ್ದಾಗ ವಿಳಾಸ ಕೇಳುವ ನೆಪದಲ್ಲಿ ಕೊರಳಿನ ಸರ ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದಾರೆ.
ಪರಾರಿಯಾಗುತ್ತಿದವರನ್ನು ತಡೆಯಲು ಮುಂದಾದ ಕೃಷ್ಣಮೂರ್ತಿಯವರ ಮೇಲೂ ಸಹ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ : https://cnewstv.in/?p=6090
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv