Cnewstv.in / 20.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಮಹಿಳೆಯರ ಸುರಕ್ಷತೆಗಾಗಿ ವಿಶೇಷ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಮಹಿಳೆಯರ ಮೇಲೆ ಲೈಂಗಿಕ ಅತ್ಯಾಚಾರ ಪ್ರಕರಣಗಳು ಒಂದು ವರ್ಷದಲ್ಲಿ ಶೇ.43 ರಷ್ಟು ಹೆಚ್ಚಳವಾಗಿದೆ. ಕಳೆದ ವರ್ಷ ಜೂನ್ ನಲ್ಲಿ 580 ಪ್ರಕರಣಗಳು ದಾಖಲಾಗಿದ್ದರೇ, ಈ ವರ್ಷ 833 ಪ್ರಕರಣಗಳು ದಾಖಲಾಗಿದೆ. ಹಿಂಸೆ ಪ್ರಕರಣಗಳು ಶೇ. 39 ರಷ್ಟು ಹೆಚ್ಚಾಗಿದೆ.
ವರದಕ್ಷಿಣೆ, ಅಪಹರಣ, ಲೈಂಗಿಕ ದೌರ್ಜನ್ಯ, ಕೊಲೆ, ಅತ್ಯಾಚಾರ ಪ್ರಕರಣಗಳು ಸಹ ದಿನೇ ದಿನೇ ಹೆಚ್ಚಾಗುತ್ತಿದೆ. ದೇಶದಲ್ಲಿ ಮಹಿಳೆಯರು ಭಯದ ವಾತಾವರಣದಲ್ಲಿ ಜೀವ ಕಳೆಯುವಂತಹ ಸನ್ನಿವೇಶ ಸೃಷ್ಟಿಯಾಗಿದೆ.

ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರೊಂದಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು, ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವ ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಕ್ರಮಗಳು ಖಂಡನೀಯ. ಆದಷ್ಟು ಬೇಗ ದೇಶದ ಮಹಿಳೆಯರ ಸುರಕ್ಷತೆಗಾಗಿ ವಿಶೇಷ ಕಾನೂನು ಜಾರಿಗೊಳಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಮುಜಮ್ಮಿಲ್ ಅನ್ವರ್, ಜಿಲ್ಲಾ ಮಹಿಳಾ ಸಂಚಾಲಕರಾದ ಆಯಿಶಾ, ಸದೀಮ್ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು
ಇದನ್ನು ಓದಿ : https://cnewstv.in/?p=6100
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv