Cnewstv.in / 20.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಸುಪ್ರೀಂ ಕೋರ್ಟ್ ಪ್ರತಿಯೊಂದು ಪ್ರಕರಣದಲ್ಲಿಯೂ ಪ್ರತ್ಯೇಕವಾಗಿ ಜಿಲ್ಲಾ ಸಮಿತಿ ದೇವಸ್ಥಾನದ ಮಂಡಳಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ನಂತರ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ವಿಶ್ಹ ಹಿಂದು ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸುಪ್ರೀಂಕೋರ್ಟ್ ಆದೇಶದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಸ್ಥಳಾಂತರಿಸುವುದು ಅನಿವಾರ್ಯವಾದರೆ ತೆರವುಗೊಳಿಸುವ ಆದೇಶವನ್ನು ವಿಶ್ವಹಿಂದು ಪರಿಷತ್ ಗೌರವಿಸುತ್ತದೆ ಆದರೆ ಆದೇಶವನ್ನು ಪಾಲಿಸುವಂತೆ ರಾಜ್ಯ ಸರ್ಕಾರವು ಶ್ರದ್ಧಾ ಕೇಂದ್ರಗಳ ಬಗ್ಗೆ ಪ್ರತ್ಯೇಕವಾಗಿ ವಿಮರ್ಶೆ ಮಾಡಿ ನಂತರ ತೀರ್ಮಾನ ಕೈಗೊಳ್ಳಬೇಕು.
ಕೇವಲ ಹಿಂದೂ ಸಮಾಜಕ್ಕೆ ಸೇರಿರುವ ಪುರಾತನವಾದ ದೇವಸ್ಥಾನಗಳನ್ನು ರಾತ್ರೋರಾತ್ರಿ ತುಗಲಕ್ ನೀತಿಯಂತೆ ಅಕ್ರಮವಾಗಿ ತೆರವುಗೊಳಿಸುವುದು ಖಂಡನಿಯ. ಸುಪ್ರೀಂಕೋರ್ಟ್ ಆದೇಶವನ್ನು ಸರಿಯಾಗಿ ಗ್ರಹಿಸದೆ ರಾತ್ರೋರಾತ್ರಿ ಹಲವಾರು ವರ್ಷಗಳ ಇತಿಹಾಸವಿರುವ ದೇವಾಲಯಗಳನ್ನು ಕೆಡವಿ ಹಿಂದೂ ಸಮಾಜಕ್ಕೆ ನೋವುಂಟು ಮಾಡಿದೆ.
ಪ್ರತಿಯೊಂದು ದೇವಸ್ಥಾನಗಳಿಗೂ ಪ್ರತ್ಯೇಕ ನೋಟಿಸ್ ಜಾರಿ ಮಾಡಿ ಸ್ಥಳಾಂತರಿಸಲು ಬೇಕಾದಂತಹ ಕ್ರಮ ಜರುಗಿಸಿ ದೇವಾಲಯಗಳನ್ನು ಉಳಿಸಿ ರಕ್ಷಣೆ ಮಾಡಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ನಿಂದ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷರಾದ ವಾಸುದೇವ್, ಜಿಲ್ಲಾ ಕಾರ್ಯದರ್ಶಿ ನಾರಾಯಣ್, ರಮೇಶ್ ಗೌಡ, ಸಚಿನ್, ಸುಧಾಕರ್ ಎಸ್ ಅರ್, ಸತೀಶ್ ಮುಂಚಿಮನೆ, ಅಂಕುಶ್ ಉಪಸ್ಥಿತರಿದ್ದರು
ಇದನ್ನು ಓದಿ : https://cnewstv.in/?p=6103
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments