Breaking News

ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆಯಾ ?

Cnewstv.in / 20.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಬೆಂಗಳೂರಿನಲ್ಲಿ 5 ವರ್ಷದ ಬಾಲಕಿಯ ಮೇಲೆ ಬಿಹಾರಿ ಮೂಲದ ಯುವಕನಿಂದ ಅತ್ಯಾಚಾರ. ಕಳೆದ ತಿಂಗಳು ಮೈಸೂರಿನಲ್ಲಿ ಹೆಣ್ಣುಮಗಳ ಮೇಲೆ ಗ್ಯಾಂಗ್ ರೇಪ್. ಹೀಗೆ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚಾದರೂ ಸಹ ಸರ್ಕಾರ ಯಾವುದೇ ರೀತಿಯ ಕಠಿಣ ಕ್ರಮಗಳನ್ನು ತೆಗೆದುಕೊಂಡಿಲ್ಲ.

ಶಿವಮೊಗ್ಗ ನಗರದಲ್ಲಿ ಸಹ ಇತ್ತೀಚಿನ ದಿನಗಳಲ್ಲಿ ಗಾಂಜಾ ಮತ್ತು ಡ್ರಗ್ಸ್ ಮಾರಾಟ ಚಲಾವಣೆಯಲ್ಲಿದೆ. ಕೆಳ ತಿಂಗಳ ಹಿಂದೆ ಬಸ್ಟ್ಯಾಂಡ್ ಸಮೀಪ ಭಿಕ್ಷುಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಇಷ್ಟೆಲ್ಲಾ ಆದರೂ ಸಹ ಸರ್ಕಾರ ಯಾವುದೇ ರೀತಿಯಾದಂತಹ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಇನ್ನುಮುಂದಾದರೂ ರಾಜ್ಯ ಸರ್ಕಾರ ಮತ್ತು ಶಿವಮೊಗ್ಗ ಜಿಲ್ಲಾಡಳಿತ ಅಪರಾಧಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.‌

ಈ ಸಂದರ್ಭದಲ್ಲಿ ಅಧ್ಯಕ್ಷರಾದ ವಾಟಾಳ್ ಮಂಜುನಾಥ್ ,ಜಿಲ್ಲಾ ಕಾರ್ಯದರ್ಶಿ ನಿತಿನ್ ರೆಡ್ಡಿ, ಅನ್ವರ್, ಕುಮಾರ, ಲೋಕೇಶ್, ರಾಘವೇಂದ್ರ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು

ಇದನ್ನು ಓದಿ : https://cnewstv.in/?p=6106

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*