Cnewstv.in / 20.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ನಗರದ ಗೋಪಾಲಗೌಡ ಬಡಾವಣೆ ಮತ್ತು ಸ್ವಾಮಿ ವಿವೇಕಾನಂದ ಬಡಾವಣೆ ಗಳು ಅವಳಿ ಬಡಾವಣೆಗಳಾಗಿದ್ದು, ಇತ್ತೀಚೆಗೆ ಅಭಿವೃದ್ಧಿ ಹೊಂದುತ್ತಿದೆ. ಈ ಬಡಾವಣೆಗಳಲ್ಲಿ ಹೆಚ್ಚಾಗಿ ನೌಕರರು ,ನಿವೃತ್ತ ನೌಕರರು ,ವ್ಯಾಪಾರಸ್ಥರು ಹಾಗೂ ಉದ್ದಿಮೆದಾರರು ವಾಸಿಸುತ್ತಿದ್ದಾರೆ.
ಸಾಮಾನ್ಯವಾಗಿ ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ವಾಯುವಿಹಾರಕ್ಕೆ ಹೋಗುವುದು ಇಲ್ಲಿನ ನಿವಾಸಿಗಳ ಅಭ್ಯಾಸ ,ಆದರೆ ಇತ್ತೀಚಿನ ದಿನಗಳಲ್ಲಿ ವಾಯುವಿಹಾರಕ್ಕೆ ಹೋಗುವ ಹಾಗೂ ತಮ್ಮ ದಿನನಿತ್ಯದ ಕೆಲಸ ಮುಗಿಸಿ ಮನೆಗೆ ಬರುವ ಒಂಟಿ ವ್ಯಕ್ತಿಗಳನ್ನು ಅಡ್ಡಗಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಅವರ ಬಳಿ ಇರುವ ಬಂಗಾರದ ಒಡವೆಗಳು ಹಣ ಮತ್ತು ಮೊಬೈಲ್ ಮುಂತಾದ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದೆ. ಜೊತೆಗೆ ಬೀಗ ಹಾಕಿರುವ ಮನೆಗಳ ಬಾಗಿಲು ಮುರಿದು ದೋಚುವ ಮನೆ ಗಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ಬಡಾವಣೆಯ ನಿವಾಸಿಗಳು ಭಯಭೀತರಾಗಿದ್ದಾರೆ.
ಬಡಾವಣೆಯ ಪಾರ್ಕ್ ಗಳು, ಖಾಲಿ ನಿವೇಶನಗಳು ಅನೈತಿಕ ಚಟುವಟಿಕೆಗಳ ತಾಣವಾಗಿದ್ದು ಗಾಂಜಾ ಮದ್ಯ ಸೇವನೆಯ ಅಡ್ಡಾಗಳಾಗಿವೆ. ಇಂತಹ ಘಟನೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಅಪರಾಧ ಪ್ರಕರಣಗಳು ಕಡಿಮೆಯಾಗಿಲ್ಲ, ಮತ್ತೆ ಮತ್ತೆ ಇಂಥ ಪ್ರಕರಣಗಳು ಮರುಕಳಿಸುತ್ತಿರುವುದರಿಂದ ಪಾದಚಾರಿಗಳು ಹಾಗೂ ವಾಹನ ಸವಾರರು ಭಯಭೀತರಾಗಿದ್ದಾರೆ.
ಆದಷ್ಟು ಬೇಗ ಅಪರಾಧಿಗಳನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ನಿವಾಸಿಗಳ ಸಂಘದಿಂದ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿ .ಡಿ. ಮಂಜುನಾಥ್, ಎಚ್. ಎಂ. ಸತ್ಯನಾರಾಯಣ, ಎಸ್ .ಸಿ .ರಾಮಚಂದ್ರ ಎಂ. .ರಾಮಪ್ಪಗೌಡ ಆರ್. ರಾಜಶೇಖರ್ ಟಿ.ಡಿ. ಜಿತೇಂದ್ರಗೌಡ .ಮೋಹನ್ ಮೂರ್ತಿ . ಲಿಂಗರಾಜು .ವೆಂಕಟೇಶ್ .ಡಾ. ಗೌತಮ್ .ರಾಜ್ ಕುಮಾರ್ .ಕೃಷ್ಣಮೂರ್ತಿ ಇನ್ನೂ ಮುಂತಾದ ನಿವಾಸಿಗಳು ಹಾಜರಿದ್ದರು .
ಇದನ್ನು ಓದಿ : https://cnewstv.in/?p=6109
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments