Cnewstv.in / 20.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ನಗರ ಬೆಳೆದು ದೊಡ್ಡದಾದರೂ ಸಹ ಬಹಿರ್ದೆಸೆ ಇಂದ ಮುಕ್ತವಾಗಿಲ್ಲ. ನಗರದಲ್ಲಿ ಎಷ್ಟೋ ಕಟ್ಟಡಗಳು, ವಾಣಿಜ್ಯ ಮಳಿಗೆಗಳನ್ನು ಬಾಡಿಗೆ ನೀಡಿದರು ಕೂಡ ಶೌಚಾಲಯ ನಿರ್ಮಿಸಿಲ್ಲ, ಅಲ್ಲಿ ಕೆಲಸ ಮಾಡುವವರಿಗೆ ಶೌಚಾಲಯದ ವ್ಯವಸ್ಥೆಯಿಲ್ಲ.
ವಾಣಿಜ್ಯ ಮಳಿಗೆಗಳಿಗೆ ಪರವಾನಗಿ ಕೊಡುವ ಮೊದಲು ಶೌಚಾಲಯದ ನಿಯಮವನ್ನು ಪಾಲಿಸಬೇಕು. ಆದರೆ ಕೆಲವು ಅಧಿಕಾರಿಗಳು ಕಟ್ಟಡ ಮಾಲೀಕರೊಂದಿಗೆ ಸೇರಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿ ಕಾಂಪ್ಲೆಕ್ಸ್ ಕಟ್ಟಲು ಅನುಮತಿ ನೀಡುತ್ತಿದ್ದಾರೆ.
ಇದಕ್ಕೆ ಕಾರಣವಾಗಿರುವ ಪಾಲಿಕೆ ಆಡಳಿತವನ್ನ ಹಾಗೂ ಆರೋಗ್ಯಾಧಿಕಾರಿಗಳನ್ನು ಅಮಾನತುಗೊಳಿಸಬೇಕು. ಹಾಗು ದುರಸ್ತಿ ಗೊಂಡಿರುವ ಶೌಚಾಲಯಗಳಿಗೆ ನೀರಿನ ಸಂಪರ್ಕ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಹೆಚ್, ಎಸ್, ಶಿವಕುಮಾರ್, ಜಯಪ್ಪ, ಸತೀಶ್, ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನು ಓದಿ : https://cnewstv.in/?p=6121
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments