Cnewstv.in / 22.09.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನವದೆಹಲಿ: ಭಾರತೀಯ ರಕ್ಷಣಾ ಪಡೆಗಳಲ್ಲಿ ಮಹಿಳೆಯರನ್ನು ನೇಮಿಸಿಕೊಳ್ಳುವ ಐತಿಹಾಸಿಕ ನಿರ್ಧಾರವನ್ನು ಸೇನಾ ಪಡೆಗಳು ಕೈಗೊಂಡಿವೆ ಎಂದು ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಅನುಸಾರ, ಸೇನೆಯಲ್ಲಿ ಮಹಿಳೆಯರಿಗೆ ಅಧಿಕಾರಿಗಳ ಹುದ್ದೆಗೇರಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಎಲ್ಲಾ ನಿಯಮಾವಳಿಗಳನ್ನು ಕೂಲಂಕಶವಾಗಿ ರೂಪಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.
2022 ರ ಮೇ ತಿಂಗಳಲ್ಲಿ ಮಹಿಳೆಯರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗುವುದು.ಆಯ್ಕೆಯಾದ ಮಹಿಳೆಯರಿಗೆ ಉತ್ತಮ ದರ್ಜೆಯ ತರಬೇತಿ ನೀಡುವ ಮೂಲಕ ಅವರನ್ನು ಸೇನಾಧಿಕಾರಿಗಳನ್ನಾಗಿ ನೇಮಿಸಿಕೊಳ್ಳಲಾಗುತ್ತದೆ ಎಂದು ಹೇಳಿದೆ.
ಇದನ್ನು ಓದಿ : https://cnewstv.in/?p=6159
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments